ಧನ್ವೀರ್ ಫೋಟೋಗೆ ಮಸಿ ಬಳಿದು ಝೈದ್ ಖಾನ್ ಅಭಿಮಾನಿಗಳ ಆಕ್ರೋಶ

Updated on: Oct 26, 2026 | 4:20 PM

ಧನ್ವೀರ್-ವಿಜಯಲಕ್ಷ್ಮಿ ದರ್ಶನ್ ನಡುವೆ ಮನಸ್ತಾಪ ಆಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಆಡಿಯೋ ತುಣುಕುಗಳು ವೈರಲ್ ಆಗಿವೆ. ಅದರಲ್ಲಿ ಧನ್ವೀರ್ ಅವರು ಝೈದ್ ಖಾನ್​ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಝೈದ್ ಖಾನ್ ಅಭಿಮಾನಿಗಳು ದೂರು ನೀಡಲು ಮುಂದಾಗಿದ್ದಾರೆ.

ನಟ ಧನ್ವೀರ್ ಮತ್ತು ವಿಜಯಲಕ್ಷ್ಮಿ ದರ್ಶನ್ ನಡುವೆ ಮನಸ್ತಾಪ ಆಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ಆಡಿಯೋ ತುಣುಕುಗಳು ವೈರಲ್ ಆಗಿವೆ. ಅದರಲ್ಲಿ ಧನ್ವೀರ್ ಅವರು ನಟ ಝೈದ್ ಖಾನ್​ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ಹಾಗಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಝೈದ್ ಖಾನ್ ಅಭಿಮಾನಿಗಳು ದೂರು ನೀಡಲು ಮುಂದಾಗಿದ್ದಾರೆ. ಧನ್ವೀರ್ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ಫಿಲ್ಮ್ ಚೇಂಬರ್​ಗೆ ಮನವಿ ಮಾಡಲಾಗಿದೆ. ಆದರೆ ದೂರು ಸ್ವೀಕರಿಸಲು ಫಿಲ್ಮ್​ ಚೇಂಬರ್ ಅಧ್ಯಕ್ಷೆ ಜಯಮಾಲಾ ನಿರಾಕರಣೆ ಮಾಡಿದ್ದಾರೆ. ‘ವೈಯಕ್ತಿಕ ಜಗಳಕ್ಕೆ ದೂರು ಸ್ವೀಕರಿಸುವುದಿಲ್ಲ’ ಎಂದು ಜಯಮಾಲಾ ಹೇಳಿದ್ದಾರೆ. ಝೈದ್ ಖಾನ್ ಅವರು ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯನಲ್ಲದ ಕಾರಣ ಕಲಾವಿದರ ಸಂಘಕ್ಕೆ ದೂರು ನೀಡುವಂತೆ ಜಯಮಾಲಾ ಸೂಚನೆ ನೀಡಿದ್ದಾರೆ. ಝೈದ್ ಖಾನ್ ಅಭಿಮಾನಿಗಳು ಧನ್ವೀರ್ ಫೋಟೋಗೆ ಮಸಿ ಬಳಿದು, ಚಪ್ಪಲಿ ಹಾರ ಹಾಕಿರುವ ಫೋಟೋ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More