ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್

Updated on: Dec 13, 2025 | 7:55 PM

Zaid Khan about Darshan: ರ್ಶನ್ ಆಪ್ತರಲ್ಲಿ ಒಬ್ಬರಾಗಿರುವ ಝೈದ್ ಖಾನ್ ಅವರ ಹೊಸ ಸಿನಿಮಾ ‘ಕಲ್ಟ್’ ಜನವರಿ 23ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರದಲ್ಲಿ ಝೈದ್ ಖಾನ್ ನಿರತರಾಗಿದ್ದಾರೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಝೈದ್ ಖಾನ್, ಜನವರಿಯಲ್ಲಿ ದರ್ಶನ್ ಅವರಿಗೆ ಜಾಮೀನು ಸಿಗುವ ನಿರೀಕ್ಷೆ ಇದೆ ಎಂದಿದ್ದಾರೆ.

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಅವರು ಜಾಮೀನಿಗಾಗಿ ಯತ್ನಿಸಿ ವಿಫಲವಾಗಿದ್ದಾರೆ. ದರ್ಶನ್ ಜೈಲಿನಲ್ಲಿರುವಾಗಲೇ ಅವರ ನಟನೆಯ ‘ಡೆವಿಲ್’ ಸಿನಿಮಾ ಬಿಡುಗಡೆ ಆಗಿದೆ. ದರ್ಶನ್ ಆಪ್ತರಲ್ಲಿ ಒಬ್ಬರಾಗಿರುವ ಝೈದ್ ಖಾನ್ ಅವರ ಹೊಸ ಸಿನಿಮಾ ‘ಕಲ್ಟ್’ ಜನವರಿ 23ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರದಲ್ಲಿ ಝೈದ್ ಖಾನ್ ನಿರತರಾಗಿದ್ದಾರೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಝೈದ್ ಖಾನ್, ಜನವರಿಯಲ್ಲಿ ದರ್ಶನ್ ಅವರಿಗೆ ಜಾಮೀನು ಸಿಗುವ ನಿರೀಕ್ಷೆ ಇದೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ