ಹೌಸ್ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ
ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ಜನವರಿ 23ರಂದು ಬಿಡುಗಡೆ ಆಯಿತು. ರಚಿತಾ ರಾಮ್, ಮಲೈಕಾ ವಸುಪಾಲ್, ರಂಗಾಯಣ ರಘು ಮುಂತಾದವರು ಕೂಡ ನಟಿಸಿದ್ದಾರೆ. ಝೈದ್ ಖಾನ್, ಮಲೈಕಾ ಅವರು ಕೆಲವು ಚಿತ್ರಮಂದಿರಗಳಿಗೆ ಭೇಟಿ ನೀಡಿದರು. ಹಲವು ಕಡೆಗಳಲ್ಲಿ ಈ ಸಿನಿಮಾ ಹೌಸ್ಫುಲ್ ಆಗಿದೆ.
ಜಮೀರ್ ಅಹ್ಮದ್ ಅವರ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ (Cult Kannada Movie) ಜನವರಿ 23ರಂದು ಬಿಡುಗಡೆ ಆಯಿತು. ಈ ಸಿನಿಮಾಗೆ ಅನಿಲ್ ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ಝೈದ್ ಖಾನ್ ಅವರ ಜೊತೆ ರಚಿತಾ ರಾಮ್ (Rachita Ram), ಮಲೈಕಾ ವಸುಪಾಲ್, ರಂಗಾಯಣ ರಘು, ಅಚ್ಯುತ್ ಕುಮಾರ್, ಕಿಶನ್ ಬಿಳಗಲಿ ಮುಂತಾದವರು ನಟಿಸಿದ್ದಾರೆ. ಜನವರಿ 23ರಂದು ಹಲವು ಕಡೆಗಳಲ್ಲಿ ಈ ಸಿನಿಮಾ ಹೌಸ್ಫುಲ್ ಆಯಿತು. ಝೈದ್ ಖಾನ್ (Zaid Khan), ಮಲೈಕಾ ಅವರು ಕೆಲವು ಚಿತ್ರಮಂದಿರಗಳಿಗೆ ಭೇಟಿ ನೀಡಿದರು. ಜನವರಿ 23ಕ್ಕೆ ‘ಲ್ಯಾಂಡ್ಲಾರ್ಡ್’, ‘ಬಾರ್ಡರ್ 2’ ಮುಂತಾದ ಸಿನಿಮಾಗಳು ಬಿಡುಗಡೆ ಆಗಿದ್ದು, ಎಲ್ಲ ಚಿತ್ರಗಳ ನಡುವೆ ಪೈಪೋಟಿ ಏರ್ಪಟ್ಟಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

