ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ

Updated on: Jan 25, 2026 | 12:02 PM

ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ಜನವರಿ 23ರಂದು ಬಿಡುಗಡೆ ಆಯಿತು. ರಚಿತಾ ರಾಮ್, ಮಲೈಕಾ ವಸುಪಾಲ್, ರಂಗಾಯಣ ರಘು ಮುಂತಾದವರು ಕೂಡ ನಟಿಸಿದ್ದಾರೆ. ಝೈದ್ ಖಾನ್, ಮಲೈಕಾ ಅವರು ಕೆಲವು ಚಿತ್ರಮಂದಿರಗಳಿಗೆ ಭೇಟಿ ನೀಡಿದರು. ಹಲವು ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಆಗಿದೆ.

ಜಮೀರ್ ಅಹ್ಮದ್ ಅವರ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ (Cult Kannada Movie) ಜನವರಿ 23ರಂದು ಬಿಡುಗಡೆ ಆಯಿತು. ಈ ಸಿನಿಮಾಗೆ ಅನಿಲ್ ಕುಮಾರ್ ಅವರು ನಿರ್ದೇಶನ ಮಾಡಿದ್​ದಾರೆ. ಝೈದ್ ಖಾನ್ ಅವರ ಜೊತೆ ರಚಿತಾ ರಾಮ್ (Rachita Ram), ಮಲೈಕಾ ವಸುಪಾಲ್, ರಂಗಾಯಣ ರಘು, ಅಚ್ಯುತ್ ಕುಮಾರ್, ಕಿಶನ್ ಬಿಳಗಲಿ ಮುಂತಾದವರು ನಟಿಸಿದ್ದಾರೆ. ಜನವರಿ 23ರಂದು ಹಲವು ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಆಯಿತು. ಝೈದ್ ಖಾನ್ (Zaid Khan), ಮಲೈಕಾ ಅವರು ಕೆಲವು ಚಿತ್ರಮಂದಿರಗಳಿಗೆ ಭೇಟಿ ನೀಡಿದರು. ಜನವರಿ 23ಕ್ಕೆ ‘ಲ್ಯಾಂಡ್​ಲಾರ್ಡ್’, ‘ಬಾರ್ಡರ್ 2’ ಮುಂತಾದ ಸಿನಿಮಾಗಳು ಬಿಡುಗಡೆ ಆಗಿದ್ದು, ಎಲ್ಲ ಚಿತ್ರಗಳ ನಡುವೆ ಪೈಪೋಟಿ ಏರ್ಪಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More