ಶಿಗ್ಗಾವಿ ಕ್ಷೇತ್ರದಿಂದ ಖಾದ್ರಿ ನಾಮಪತ್ರ ಹಿಂಪಡೆಯುವಲ್ಲಿ ಯಶ ಸಾಧಿಸಿರುವ ಜಮೀರ್ ಮುಖದಲ್ಲಿ ಬತ್ತದ ನಗು
ಅಜ್ಜಂಪೀರ್ ಖಾದ್ರಿಯವರನ್ನು ಸ್ಪರ್ಧೆಯಿಂದ ಹಿಂದೆ ಸರಿಸುವುದು ಅಷ್ಟು ಸುಲಭದ ಕೆಲಸವಾಗಿರಲಿಲ್ಲ. ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ನಾಮಪತ್ರ ಸಲ್ಲಿಸಿದ ದಿನದಿಂದ ಖಾದ್ರಿಯನ್ನು ಸಚಿವ ಜಮೀರ್ ತಮ್ಮ ಜೊತೆಯಲ್ಲೇ ಇಟ್ಟುಕೊಂಡಿದ್ದರು. ಖಾದ್ರಿ ನಾಮಪತ್ರ ಹಿಂಪಡೆಯದಿದ್ದರೆ ಎನ್ಡಿಎ ಅಭ್ಯರ್ಥಿ ಭರತ್ ಬೊಮ್ಮಾಯಿ ಸುಲಭ ಜಯ ಸಾಧಿಸುತ್ತಿದ್ದರು.
ಹಾವೇರಿ: ಶಿಗ್ಗಾವಿಯಲ್ಲಿ ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿದ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್, ದರ್ಶನ್ಗೆ ಜಾಮೀನು ಸಿಕ್ಕಿರುವುದಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿ ಮಾಹಿತಿ ಪಡೆದು ಮಾತಾಡುವುದಾಗಿ ಹೇಳಿದರು. ಶಿಗ್ಗಾವಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ವಾಪಸ್ಸು ಪಡೆದು ಅಧಿಕೃತ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರ ಪರವಾಗಿ ಕೆಲಸ ಮಾಡಲು ಒಪ್ಪಿಸುವಲ್ಲಿ ಸಫಲರಾಗಿರುವ ಜಮೀರ್ ಅಹ್ಮದ್ ಖುಷಿಯಿಂದ ಬೀಗುತಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಬಿಜೆಪಿ ಸಮಿತಿ ಕೇಳುವ ಎಲ್ಲ ದಾಖಲೆಗಳನ್ನು ಕೊಡಲು ಎಂಬಿ ಪಾಟೀಲ್ ಡಿಸಿಗೆ ಹೇಳಿದ್ದಾರೆ: ಜಮೀರ್
Follow Us
Latest Videos
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು

