ಸಂವಿಧಾನಬಾಹಿರ ಮಾತಾಡಿರುವ ರಾಷ್ಟ್ರದ್ರೋಹಿ ಜಮೀರ್ ಅಹ್ಮದ್​ನನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು: ಕೆಎಸ್ ಈಶ್ವರಪ್ಪ

ಅರುಣ್​ ಕುಮಾರ್​ ಬೆಳ್ಳಿ

Updated on: Nov 21, 2023 | 2:34 PM

ಜಮೀರ್ ಅಹ್ಮದ್ ವಿರುದ್ಧ ಏಕವಚನದಲ್ಲೇ ದಾಳಿ ನಡೆಸಿರುವ ಈಶ್ವರಪ್ಪ, ಜಮೀರ್ ತೆಲಂಗಾಣದಲ್ಲಿ ಸಂವಿಧಾನಬಾಹಿರ ಮಾತನ್ನಾಡಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಇದುವರೆಗೆ ಯಾಕೆ ಸುಮ್ಮನಿದ್ದಾರೋ ಗೊತ್ತಿಲ್ಲ, ಅವರಿಗೆ ಸಂವಿಧಾನದ ಬಗ್ಗೆ ಗೌರವ ಇದ್ದರೆ ಕೂಡಲೇ ಜಮೀರ್ ನನ್ನು ಸಚಿವ ಸ್ಥಾನದಿಂದ ಕಿತ್ತೊಗೆಯಬೇಕು ಎಂದು ಆಗ್ರಹಿಸಿದರು.

ಶಿವಮೊಗ್ಗ: ಸ್ಪೀಕರ್ ಸ್ಥಾನದ ಬಗ್ಗೆ ತೆಲಂಗಾಣದಲ್ಲಿ ಹಗುರವಾಗಿ ಮಾತಾಡಿ ಸಂವಿಧಾನಕ್ಕೆ ಅಪನಿಂದನೆ ಮಾಡಿರುವ ರಾಷ್ಟ್ರದ್ರೋಹಿ ಬೆಜೆಡ್ ಜಮೀರ್ ಅಹ್ಮದ್ ಖಾನ್ (BZ Zameer Ahmed Khan) ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಹಿರಿಯ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ಹೇಳಿದರು. ನಗರಲ್ಲಿಂದು ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಅವರು, ಸ್ಪೀಕರ್ ಸ್ಥಾನ (Speaker chair) ಅತ್ಯಂತ ಗೌರವಯುತವಾದದ್ದು, ವಿಧಾನ ಸಭಾ ಸದಸ್ಯರು ಆ ಸ್ಥಾನಕ್ಕೆ ಗೌರವ ಸಲ್ಲಿಸುತ್ತಾರೆಯೇ ಹೊರತು, ಅದರ ಮೇಲೆ ಕುಳಿತಿರುವ ವ್ಯಕ್ತಿಗಲ್ಲ, ಖಾದರ್ ಅವರು ಕೂರುವ ಪೀಠಕ್ಕೆ ಎಲ್ಲ ಸದಸ್ಯರು ಗೌರವ ಸಲ್ಲಿಸುತ್ತಾರೆ, ಖಾದರ್ ಅವರಿಗಲ್ಲ ಎಂದು ಈಶ್ವರಪ್ಪ ಹೇಳಿದರು. ಜಮೀರ್ ಅಹ್ಮದ್ ವಿರುದ್ಧ ಏಕವಚನದಲ್ಲೇ ದಾಳಿ ನಡೆಸಿರುವ ಈಶ್ವರಪ್ಪ, ಜಮೀರ್ ತೆಲಂಗಾಣದಲ್ಲಿ ಸಂವಿಧಾನಬಾಹಿರ ಮಾತನ್ನಾಡಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಇದುವರೆಗೆ ಯಾಕೆ ಸುಮ್ಮನಿದ್ದಾರೋ ಗೊತ್ತಿಲ್ಲ, ಅವರಿಗೆ ಸಂವಿಧಾನದ ಬಗ್ಗೆ ಗೌರವ ಇದ್ದರೆ ಕೂಡಲೇ ಜಮೀರ್ ನನ್ನು ಸಚಿವ ಸ್ಥಾನದಿಂದ ಕಿತ್ತೊಗೆಯಬೇಕು ಎಂದು ಆಗ್ರಹಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.