ದಾವಣಗೆರೆ ಬೈ ಎಲೆಕ್ಷನ್: ಅಸಮಾಧಾನದ ಆರೋಪಕ್ಕೆ ಸಚಿವ ಜಮೀರ್ ಫಸ್ಟ್ ರಿಯಾಕ್ಷನ್
ಸಚಿವ ಜಮೀರ್ ಅಹ್ಮದ್ ಖಾನ್ ದಾವಣಗೆರೆ ದಕ್ಷಿಣ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡಿದ್ದು, ಟಿಕೆಟ್ ಅಸಮಾಧಾನದ ಆರೋಪ ನಿರಾಕರಿಸಿದ್ದಾರೆ. ಶಾಮನೂರು ಶಿವಶಂಕರಪ್ಪನವರು 2023ರಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುವ ಭರವಸೆ ನೀಡಿದ್ದರೂ, ಕುಟುಂಬದವರಿಗೆ ಟಿಕೆಟ್ ನೀಡುವ ಪಕ್ಷದ ನಿರ್ಧಾರವನ್ನು ಒಪ್ಪಿಕೊಂಡಿರುವುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿಯವರ ಸೂಚನೆಯಂತೆ ಪ್ರಚಾರಕ್ಕೆ ಆಗಮಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಹುಬ್ಬಳ್ಳಿ, ಏಪ್ರಿಲ್ 05: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಖಾಡಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಕೊನೆಗೂ ಅಧಿಕೃತವಾಗಿ ಎಂಟ್ರಿ ನೀಡುತ್ತಿದ್ದಾರೆ. ಈ ನಡುವೆ ಹುಬ್ಬಳ್ಳಿಯಲ್ಲಿ ಟಿವಿ9ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ತಾವು ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದೆಂಬ ಆರೋಪ ಹಾಗೂ ಟಿಕೆಟ್ ವಿಚಾರದಲ್ಲಿನ ಅಸಮಾಧಾನದ ಕುರಿತ ಗೊಂದಲಗಳಿಗೆ ಅವತು ಸ್ಪಷ್ಟನೆ ನೀಡಿದ್ದಾರೆ. ದಾವಣಗೆರೆ ದಕ್ಷಿಣ ಟಿಕೆಟ್‌ಗಾಗಿ ತಾವು ಯಾವುದೇ ಲಾಬಿ ನಡೆಸಿಲ್ಲ. 2023ರ ವಿಧಾನಸಭಾ ಚುನಾವಣೆ ವೇಳೆ, ಶಾಮನೂರು ಶಿವಶಂಕರಪ್ಪನವರು ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿ, ತಾವೇ ಗೆಲ್ಲಿಸಿಕೊಂಡು ಬರುವುದಾಗಿ ಭರವಸೆ ನೀಡಿದ್ದರು. ಆದರೆ, ಪಕ್ಷದ ಹೈಕಮಾಂಡ್ ಕುಟುಂಬಕ್ಕೆ ಟಿಕೆಟ್ ನೀಡುವ ಸಂಪ್ರದಾಯದಂತೆ ಶಾಮನೂರು ಕುಟುಂಬದ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಪಕ್ಷ ಹೈಕಮಾಂಡ್ ನಿರ್ಧಾರದಂತೆ ನಡೆಯುತ್ತದೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
