ಡಿಸಿಎಂ ಸ್ಥಾನ ಕೊಡೋದಾದ್ರೆ ನಾನ್​ ರೆಡಿ ಎಂದ ಸಚಿವ ಜಮೀರ್​ ಅಹ್ಮದ್​ ಖಾನ್​

Updated on: Nov 03, 2025 | 5:45 PM

ಸಚಿವ ಸಂಪುಟ ಪುನಾರನೆ ಬಗ್ಗೆ ರಾಜ್ಯ ಕಾಂಗ್ರೆಸ್​ನಲ್ಲಿ ಚರ್ಚೆ ಶುರುವಾಗಿರುವ ಹೊತ್ತಲ್ಲಿಯೇ ಹೈಕಮಾಂಡ್ ನನ್ನ ಡಿಸಿಎಂ ಮಾಡಿದ್ರೆ ನಿಭಾಯಿಸುತ್ತೇನೆ ಎಂದು ಸಚಿವ ಜಮೀರ್ ಅಹ್ಮದ್​ ಖಾನ್​​ ಹೇಳಿದ್ದಾರೆ. ನನ್ನ ಡಿಸಿಎಂ ಮಾಡುವಂತೆ ಜನ ಒತ್ತಾಯ ಮಾಡುತ್ತಿದ್ದು, ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ ಎಂದಿದ್ದಾರೆ.

ಹಾವೇರಿ, ನವೆಂಬರ್​ 03: ನನ್ನ ಡಿಸಿಎಂ ಮಾಡುವಂತೆ ಜನ ಒತ್ತಾಯ ಮಾಡುತ್ತಿದ್ದಾರೆ. ಹೈಕಮಾಂಡ್ ನನ್ನ ಡಿಸಿಎಂ ಮಾಡಿದ್ರೆ ನಿಭಾಯಿಸುತ್ತೇನೆ ಎಂದು ಸಚಿವ ಜಮೀರ್ ಅಹ್ಮದ್​ ಖಾನ್​​ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಮಾತನಾಡಿದ ಸಚಿವರು, ನನಗೆ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ನಾನು ಎರಡೂವರೆ ವರ್ಷ ಮಂತ್ರಿ ಆಗಿದ್ದು, ಸಚಿವ ಸ್ಥಾನ ಬಿಟ್ಟು ಪಕ್ಷದ ಕೆಲಸ ಮಾಡು ಅಂದ್ರೂ ನಾನು ಸಿದ್ಧ. ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ಸಿಎಂ ಬದಲಾವಣೆ ಸಂಬಂಧ ಯಾವ ಒಪ್ಪಂದವೂ ಆಗಿಲ್ಲ. 2028ರವರೆಗೂ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ. ನಮ್ಮದು ಹೈಕಮಾಂಡ್ ಪಕ್ಷ, ನಾನು ಪಕ್ಷದ ಶಿಸ್ತಿನ ಸಿಪಾಯಿ. ಹೈಕಮಾಂಡ್ ಹಾಕಿದ ಗೆರೆಯನ್ನು ನಾವು ದಾಟುವುದಿಲ್ಲ ಎಂದಿದ್ದಾರೆ. ಸಚಿವ ಸಂಪುಟ ಪುನಾರನೆ ಬಗ್ಗೆ ರಾಜ್ಯ ಕಾಂಗ್ರೆಸ್​ನಲ್ಲಿ ಚರ್ಚೆ ಶುರುವಾಗಿರುವ ಹೊತ್ತಲ್ಲಿ, ಸಚಿವ ಜಮೀರ್​ ಹೇಳಿಕೆ ತೀವ್ರ ಕುತೂಹಲ ಕೆರಳಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.