ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ್ದ ಲೋಕಾಯುಕ್ತ ಮನವಿ ತಿರಸ್ಕರಿಸಿದ ರಾಜ್ಯಪಾಲ

Edited By:

Updated on: Jul 14, 2026 | 9:38 PM

ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಸಲ್ಲಿಸಿದ್ದ ಮನವಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ತಾಂತ್ರಿಕ ಮತ್ತು ಕಾನೂನಾತ್ಮಕ ಕಾರಣಗಳನ್ನು ಉಲ್ಲೇಖಿಸಿ ಈ ಕಡತವನ್ನು ವಾಪಸ್ ಕಳುಹಿಸಲಾಗಿದೆ. ಈ ಬೆಳವಣಿಗೆ ಜಮೀರ್ ಅಹ್ಮದ್ ಖಾನ್‌ಗೆ ತಾತ್ಕಾಲಿಕ ರಿಲೀಫ್ ನೀಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಬೆಂಗಳೂರು, ಜು.14: ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸದ್ಯಕ್ಕೆ ನಿರಾಳತೆ ದೊರೆತಿದೆ. ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಸಲ್ಲಿಸಿದ್ದ ಮನವಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ತಾಂತ್ರಿಕ ಹಾಗೂ ಕಾನೂನಾತ್ಮಕ ಕಾರಣಗಳನ್ನು ಉಲ್ಲೇಖಿಸಿ ರಾಜ್ಯಪಾಲರು ಈ ಸಂಬಂಧಿ ಕಡತವನ್ನು ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಮೀರ್ ಅಹ್ಮದ್ ಖಾನ್ ವಿರುದ್ಧದ ಐಎಂಎ ಹಗರಣ ಮತ್ತು ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ಲೋಕಾಯುಕ್ತ ರಾಜ್ಯಪಾಲರಿಗೆ ಮನವಿ ಸಲ್ಲಿಸಿತ್ತು. ಆದರೆ, ಈ ಮನವಿಯನ್ನು ಪರಿಶೀಲಿಸಿದ ರಾಜ್ಯಪಾಲರು, ಪ್ರಾಸಿಕ್ಯೂಷನ್ ಅನುಮತಿ ನೀಡಲು ನಿರಾಕರಿಸಿದ್ದಾರೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಪ್ರಸ್ತುತ ಸಂಪುಟ ವಿಸ್ತರಣೆಯ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ, ಜಮೀರ್ ಅಹ್ಮದ್ ಖಾನ್ ಅವರಿಗೆ ಈ ತಾತ್ಕಾಲಿಕ ರಿಲೀಫ್ ಸಿಕ್ಕಿರುವುದು ಮಹತ್ವ ಪಡೆದುಕೊಂಡಿದೆ. ಲೋಕಾಯುಕ್ತದ ಕಡತ ವಾಪಸ್ ಪಡೆದಿರುವ ರಾಜ್ಯಪಾಲರ ನಿರ್ಧಾರದಿಂದಾಗಿ, ಜಮೀರ್ ಅಹ್ಮದ್ ಖಾನ್ ವಿರುದ್ಧದ ಕಾನೂನು ಹೋರಾಟಕ್ಕೆ ಹಿನ್ನಡೆಯಾದಂತಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us