‘ನನಗೆ ಅದು ಸಂಬಂಧ ಇಲ್ಲ’: ದರ್ಶನ್​ ಬಳ್ಳಾರಿ ಜೈಲಿಗೆ ಬಂದ ಬಗ್ಗೆ ಜಮೀರ್​ ನೇರ ಮಾತು

Updated on: Sep 01, 2024 | 2:33 PM

ನಟ ದರ್ಶನ್​ ಮತ್ತು ಸಚಿವ ಜಮೀರ್ ಅಹ್ಮದ್​ ಖಾನ್​ ನಡುವೆ ಉತ್ತಮ ಒಡನಾಟ ಇದೇ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಈಗ ದರ್ಶನ್​ ಅವರು ಬಳ್ಳಾರಿ ಜೈಲಿಗೆ ಶಿಫ್ಟ್​ ಆಗಿದ್ದಕ್ಕೂ ತಮಗೂ ಯಾವುದೇ ಸಂಬಂಧ ಇಲ್ಲ ಎಂಬುದನ್ನು ಜಮೀರ್​ ಅಹ್ಮದ್​ ಖಾನ್​ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಅವರು ಪ್ರತಿಕ್ರಿಯಿ ನೀಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..

ದರ್ಶನ್​ ಅವರನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಜೈಲಿಗೆ ಶಿಫ್ಟ್​ ಮಾಡಿದ ಬಗ್ಗೆ ಜಮೀರ್​ ಅಹ್ಮದ್​ ಖಾನ್​ ಪ್ರತಿಕ್ರಿಯೆ ನೀಡಿದ್ದಾರೆ. ಜಮೀರ್​ ಅವರು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ. ಆದ್ದರಿಂದಲೇ ದರ್ಶನ್​ ಅವರನ್ನು ಬಳ್ಳಾರಿಗೆ ಶಿಫ್ಟ್​ ಮಾಡಲಾಯ್ತಾ ಎಂಬ ಪ್ರಶ್ನೆಗೆ ಜಮೀರ್​ ಉತ್ತರಿಸಿದ್ದಾರೆ. ‘ನನಗೆ ಅದು ಸಂಬಂಧ ಇಲ್ಲ. ಪೊಲೀಸ್ ಇಲಾಖೆ ತೀಮಾನದಿಂದ ಬಳ್ಳಾರಿಗೆ ಶಿಫ್ಟ್​ ಮಾಡಿದ್ದಾರೆ. ನಾನು ಜಿಲ್ಲಾ ಉಸ್ತುವಾರಿ ಸಚಿವ ಮಾತ್ರ. ನಾನು ಡಿಜಿ ಅಲ್ಲ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More