ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ವಿರೋಧಿಗಳಿಗೆ ಜಮೀರ್​​ ಹೇಳಿದ್ದೇನು?

Edited By:

Updated on: Aug 03, 2026 | 2:37 PM

ವಿವಾದಾತ್ಮಕ ಆಡಿಯೋ ವೈರಲ್ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೂತನ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ಹಿರಿಯ ನಾಯಕ, ಶಾಸಕ ಜಮೀರ್ ಅಹ್ಮದ್ ಖಾನ್ ಅವರು ತಮ್ಮ ರಾಜಕೀಯ ವಿರೋಧಿಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಜೊತೆಗೆ ಹೈಕಮಾಂಡ್ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವುದಾಗಿ ಹೇಳಿದ್ದಾರೆ.

ಬೆಂಗಳೂರು, ಆಗಸ್ಟ್​​ 03: ಫಸ್ಟ್​​ ಲಿಸ್ಟ್​​ನಲ್ಲಿಯೇ ತಮ್ಮ ಹೆಸರು ಬರುವ ನಿರೀಕ್ಷೆ ಇತ್ತಾದರೂ ಆಡಿಯೋ ರಿಲೀಸ್​​ ಹಿನ್ನೆಲೆ ಹಿನ್ನಡೆಯಾಗಿದೆ ಎಂದು ಹಿಂದೆಯೇ ಹೇಳಿದ್ದೆ. ಎರಡನೇ ಪಟ್ಟಿಯ ಬಗ್ಗೆ ನಿರೀಕ್ಷೆ ಇತ್ತಾದರೂ ಹೈಕಮಾಂಡ್​​ ನಿರ್ಧಾರಕ್ಕೆ ಬದ್ಧವಾಗಿದ್ದೆ. 2028ರ ಚುನಾವಣೆಗೆ ಕೆಲಸ ಮಾಡು ಎಂದು ಪಕ್ಷ ಹೇಳಿದ್ದರೂ ತಯಾರಿದ್ದೆ. ಆದರೆ ಪಕ್ಷ ಇವತ್ತು ತನಗೆ ಜವಾಬ್ದಾರಿ ನೀಡಿದೆ ಎಂದು ಶಾಸಕ ಜಮೀರ್​​ ಅಹ್ಮದ್​​ ಖಾನ್​​ ತಿಳಿಸಿದ್ದಾರೆ. ವಿರೋಧಿಗಳು ಏನೇನು ಪ್ರಯತ್ನ ಮಾಡಿದರು ಎಂಬುದೆಲ್ಲ ಈಗ ಬೇಡ. ಪಕ್ಷ ನೀಡಿರುವ ಹೊಣೆಗಾರಿಕೆ ನಿಭಾಯಿಸುತ್ತೇನೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Aug 03, 2026 02:34 PM
Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More