Who would be CM? ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿ ಅಂತ ದೆಹಲಿಯ ಹಜರತ್ ನಿಜಾಮುದ್ದೀನ್ ದರ್ಗಾದಲ್ಲಿ ಜಮೀರ್ ಅಹ್ಮದ್ ಪ್ರಾರ್ಥನೆ

ಅರುಣ್​ ಕುಮಾರ್​ ಬೆಳ್ಳಿ

Updated on: May 16, 2023 | 4:33 PM

ದರ್ಗಾದಲ್ಲಿ ಅವರು ಹಜರತ್ ನಿಜಾಮುದ್ದೀನ್ ಸಮಾಧಿಯ ಮೇಲೆ ಚಾದರ್ ಹೊದೆಸಿ, ಹೂಗಳನ್ನು ಚೆಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವುದನ್ನು ನೋಡಬಹುದು.

ದೆಹಲಿ: ಚಾಮರಾಜಪೇಟೆಯಿಂದ ವಿಧಾನಸಭೆ ಆಯ್ಕೆಯಾಗಿರುವ ಜಮೀರ್ ಅಹ್ಮದ್ (Zameer Ahmed) ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿ. ಸಿದ್ದರಾಮಯ್ಯ ಜೊತೆ ಅವರಿಗೆ ಮುಖ್ಯಮಂತ್ರಿ ಹುದ್ದೆಗೆ ಲಾಬಿ ಮಾಡಲು ದೆಹಲಿಗೆ ಹೋಗಿರುವ ಗೆದ್ದ ಅಭ್ಯರ್ಥಿಗಳ ಪೈಕಿ ಜಮೀರ್ ಸಹ ಒಬ್ಬರು. ಜಮೀರ್ ದೆಹಲಿಗೆ ಹೋಗಿದ್ದೂ ಅಲ್ಲದೆ, ಮಹಾನಗರದಲ್ಲಿರುವ ಹಜರತ್ ನಿಜಾಮುದ್ದೀನ್ ದರ್ಗಾಗೆ (Hazarath Nizamuddin Dargah) ತೆರಳಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ ಅಂತ ಪ್ರಾರ್ಥನೆ ಕೂಡ ಸಲ್ಲಿಸಿದ್ದಾರೆ. ದರ್ಗಾದಲ್ಲಿ ಅವರು ಹಜರತ್ ನಿಜಾಮುದ್ದೀನ್ ಸಮಾಧಿಯ ಮೇಲೆ ಚಾದರ್ ಹೊದೆಸಿ, ಹೂಗಳನ್ನು ಚೆಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವುದನ್ನು ನೋಡಬಹುದು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.