Zameer Ahmed; ಆರಂಭದಿಂದಲೂ ಸಿದ್ದರಾಮಯ್ಯ ಪರ ನಿಂತಿರುವ ಜಮೀರ್ ಅಹ್ಮದ್ರನ್ನು ಉಪಮುಖ್ಯಮಂತ್ರಿ ಮಾಡಬೇಕು: ಜಮೀರ್ ಅಭಿಮಾನಿ
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕೆಂದು ಮೊದಲಿನಿಂದಲೂ ಆಗ್ರಹಿಸುತ್ತಾ ಬಂದಿರುವ ಜಮೀರ್ ರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂದು ಅಭಿಮಾನಿ ಹೇಳುತ್ತಾರೆ.
ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅಂತ ಹೈಕಮಾಂಡ್ ನಿರ್ಧರಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಅವರ ಅಭಿಮಾನಿಗಳಲ್ಲಿ ಒಬ್ಬರಾಗಿರುವ ಈ ವ್ಯಕ್ತಿ ಹರಿಹರದಿಂದ ಬೆಂಗಳೂರಿಗೆ ಆಗಮಿಸಿ ಸಿದ್ದರಾಮಯ್ಯ ನಿವಾಸದ ಬಳಿ ಬಿ ಜೆಡ್ ಜಮೀರ್ ಅಹ್ಮದ್ (BZ Zameer Ahmed) ಅವರ ಪೋಸ್ಟರ್ ಹಿಡಿದು ನಿಂತಿದ್ದಾರೆ. ಸಿದ್ದರಾಮಯ್ಯನವರ ಬಗ್ಗೆ ಗುಣಗಾನ ಮಾಡುತ್ತಲೇ ಹೋಗುವ ಅವರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕೆಂದು ಮೊದಲಿನಿಂದಲೂ ಆಗ್ರಹಿಸುತ್ತಾ ಬಂದಿರುವ ಜಮೀರ್ ರನ್ನು ಉಪಮುಖ್ಯಮಂತ್ರಿ ಮಾಡಬೇಕು ಅನ್ನುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ