‘ವೀಲ್ ಚೇರ್ ರೋಮಿಯೋ’ ಚಿತ್ರ ನೋಡಿದ ಜಮೀರ್ ಅಹ್ಮದ್; ಹೊಸ ಹೀರೋಗೆ ಸನ್ಮಾನ
Zameer Ahmed: ರಾಜಕೀಯದ ಕೆಲಸಗಳ ನಡುವೆ ಬಿಡುವು ಮಾಡಿಕೊಂಡ ಜಮೀರ್ ಅಹ್ಮದ್ ಅವರು ‘ವೀಲ್ ಚೇರ್ ರೋಮಿಯೋ’ ಸಿನಿಮಾ ನೋಡಿದ್ದಾರೆ. ಚಿತ್ರದ ಹೀರೋ ರಾಮ್ ಚೇತನ್ಗೆ ಅವರು ಸನ್ಮಾನ ಮಾಡಿದ್ದಾರೆ.
ಕನ್ನಡದ ‘ವೀಲ್ ಚೇರ್ ರೋಮಿಯೋ’ (Wheelchair Romeo) ಸಿನಿಮಾ ಸಖತ್ ಸದ್ದು ಮಾಡುತ್ತಿದೆ. ಪ್ರೇಕ್ಷಕರಿಂದ ಮತ್ತು ವಿಮರ್ಶಕರಿಂದ ಈ ಚಿತ್ರಕ್ಕೆ ಮೆಚ್ಚುಗೆ ಸಿಕ್ಕಿದೆ. ಅಲ್ಲದೇ ಇತ್ತೀಚೆಗಷ್ಟೇ ಕಿಚ್ಚ ಸುದೀಪ್ ಕೂಡ ಆಲ್ ದಿ ಬೆಸ್ಟ್ ಹೇಳಿದ್ದರು. ಈಗ ಈ ಸಿನಿಮಾವನ್ನು ಜಮೀರ್ ಅಹ್ಮದ್ (Zameer Ahmed) ಅವರು ನೋಡಿದ್ದಾರೆ. ಅವರಿಗೆ ‘ವೀಲ್ ಚೇರ್ ರೋಮಿಯೋ’ ಸಿನಿಮಾ ತುಂಬ ಇಷ್ಟ ಆಗಿದೆ. ಹಾಗಾಗಿ ಹೊಸ ಹೀರೋ ರಾಮ್ ಚೇತನ್ಗೆ ಅವರು ಸನ್ಮಾನ ಮಾಡಿದ್ದಾರೆ. ಮಯೂರಿ (Mayuri), ರಂಗಾಯಣ ರಘು, ಸುಚೇಂದ್ರ ಪ್ರಸಾದ್ ಮುಂತಾದ ಅನುಭವಿ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಶೇಷವಾದ ಒಂದು ಕಥೆಯನ್ನು ಹೊಂದಿರುವ ‘ವೀಲ್ ಚೇರ್ ರೋಮಿಯೋ’ ಚಿತ್ರಕ್ಕೆ ನಟರಾಜ್ ಜಿ. ನಿರ್ದೇಶನ ಮಾಡಿದ್ದಾರೆ. ತಿಮ್ಮಪ್ಪ ವೆಂಕಟಾಚಲಯ್ಯ ನಿರ್ಮಾಣ ಮಾಡಿದ್ದು, ಬಿ.ಜೆ. ಭರತ್ ಸಂಗೀತ ನೀಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

