ಯುದ್ಧ ಮಾಡಲು ನಮ್ಮವರು ಯಾರೂ ಹೋಗಲ್ಲ: ಜಮೀರ್​ಗೆ ಸತೀಶ್​ ಜಾರಕಿಹೊಳಿ ಟಾಂಗ್​

Updated on: May 04, 2025 | 10:16 PM

ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ನಿರ್ಧಾರ ಕೇಂದ್ರ ಸರ್ಕಾರದ್ದಾಗಿದೆ ಎಂದು ಹೇಳಿದ್ದಾರೆ. ಭಾರತೀಯ ಸೇನೆ ಬಲಿಷ್ಠಚಾಗಿದೆ. ಪಾಕಿಸ್ತಾನದ ಮೇಲೆ ಯುದ್ಧ ಮಾಡಬೇಕಾದ ವಿಚಾರವಾಗಿ ಕೇಂದ್ರ ಸರ್ಕಾರ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಸಿದ್ದಾರೆ.

ಹುಬ್ಬಳ್ಳಿ, ಮೇ 04: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್​ ಶಾ ಒಪ್ಪಿಗೆ ಕೊಟ್ಟರೆ ನಾನು ಪಾಕಿಸ್ತಾನದ ಜೊತೆ ಯುದ್ಧ ಮಾಡಲು ಸಿದ್ಧನಿದ್ದೇನೆ ಎಂಬ ಸಚಿವ ಜಮೀರ್ ಅಹ್ಮದ್​ ಹೇಳಿಕೆ ನೀಡಿದ್ದರು. ಇದಕ್ಕೆ ಸಚಿವ ಸತೀಶ್​ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, ಯುದ್ಧ ಮಾಡಲು ಬಿಜೆಪಿ ಮತ್ತು ಕಾಂಗ್ರೆಸ್​ ಪಕ್ಷದಿಂದ ಯಾರೂ ಹೋಗಲ್ಲ. 22 ಲಕ್ಷ ಜನ ಯೋಧರಿದ್ದಾರೆ ಅವರು ಮಾಡುತ್ತಾರೆ. ನಮ್ಮ ಸೇನೆ ಬಲಿಷ್ಠವಾಗಿದೆ ಎಂದು ಹೇಳಿದರು.

ಇನ್ನು, ಭಾರತ ಪಾಕಿಸ್ತಾನದ ಮೇಲೆ ಯುದ್ಧ ಮಾಡಬೇಕು ಎಂಬ ವಿಚಾರವಾಗಿ ಮಾತನಾಡಿದ ಅವರು, ಪಾಕಿಸ್ತಾನದ ಮೇಲೆ ಯುದ್ಧ ಮಾಡುವುದು ಕೇಂದ್ರಕ್ಕೆ ಬಿಟ್ಟಿದ್ದು. ಯಾವಾಗ ಏನ್ಮಾಡಬೇಕೆಂದು ಅವರು ನಿರ್ಧಾರ ಮಾಡುತ್ತಾರೆ. ಕೇಂದ್ರ ಸರ್ಕಾರ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳುತ್ತೆ ಎಂದರು.

Published on: May 04, 2025 10:15 PM