ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ

Updated on: Mar 23, 2026 | 8:35 AM

‘ಸರಿಗಮಪ’ ಶೋನಲ್ಲಿ ಬಡವರಿಗೆ, ಸಿಂಪತಿ ಕಾರ್ಡ್​ ಮೇಲೆ ಮಣೆ ಹಾಕಲಾಗುತ್ತದೆ ಎಂಬ ವರದಿ ಇದೆ. ಈ ಬಗ್ಗೆ ಸೋಶೀಯಲ್ ಮೀಡಿಯಾದಲ್ಲಿ ವಿಡಿಯೋಗಳು ಹರಿದಾಡುತ್ತವೆ. ಈ ವಿಡಿಯೋಗೆ ಈ ಮೊದಲು ಅನುಪಮಾ ಗೌಡ ಅವರು ಮಾತನಾಡಿದ್ದರು. ಈ ವಿಡಿಯೋಗೆ ಸ್ಪಷ್ಟನೆ ನೀಡಿದ್ದಾರೆ ಅವರು.  

‘ಸರಿಗಮಪ’ ಶೋನಲ್ಲಿ ಪ್ರತಿ ಬಾರಿಯೂ ಸಿಂಪತಿಗಾಗಿ ಅನೇಕರನ್ನು ತರುತ್ತಾರೆ, ಆಡಿಷನ್ ನಡೆಸುವಾಗಲೇ ಆ ರೀತಿಯಲ್ಲಿ ಸ್ಪರ್ಧಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂಬ ಆರೋಪ ಇದೆ. ಈಗ ಸರಿಗಮಪ ಹೊಸ ಸೀಸನ್ ಬರುತ್ತಿದೆ. ಪ್ರೋಮೋದಲ್ಲೇ ಈ ವಿಷಯದ ಬಗ್ಗೆ ಸ್ಪಷ್ಟನೆ ನೀಡಲಾಗಿದೆ. ಗಾಯಕ ಹಾಗೂ ಶೋ ಜಡ್ಜ್ ವಿಜಯ್ ಪ್ರಕಾಶ್ ಅವರು ಈ ವಿಷಯವಾಗಿ ಸ್ಪಷ್ಟನೆ ನೀಡುವ ರೀತಿಯಲ್ಲಿ ಪ್ರೋಮೋ ಮಾಡಲಾಗಿದೆ. ಶೀಘ್ರದಲ್ಲಿ ಜೀ ಕನ್ನಡದಲ್ಲಿ ಸರಿಗಮಪ ಲಿಟಲ್ ಚಾಂಪ್ಸ್ ಆರಂಭ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More