AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!

ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!

ಭಾವನಾ ಹೆಗಡೆ
|

Updated on: Aug 07, 2026 | 12:20 PM

Share

ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಆನ್‌ಲೈನ್‌ನಲ್ಲಿ ಗ್ರಾಹಕರನ್ನು ದಾರಿ ತಪ್ಪಿಸುವ ಡಾರ್ಕ್ ಪ್ಯಾಟರ್ನ್ ಅಕ್ರಮಗಳನ್ನು ತಡೆಗಟ್ಟಲು ಕಠಿಣ ಕ್ರಮ ಕೈಗೊಂಡಿದೆ. ಈ ನಿಯಮಗಳನ್ನು ಉಲ್ಲಂಘಿಸಿದ 9 ಪ್ರಮುಖ ಡಿಜಿಟಲ್ ಕಂಪನಿಗಳಿಗೆ ಒಟ್ಟು 20 ಲಕ್ಷ ರೂಪಾಯಿ ದಂಡ ವಿಧಿಸಿ ಶಾಕ್ ನೀಡಿದೆ.

ಬೆಂಗಳೂರು, ಆಗಸ್ಟ್ 07: ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಆನ್‌ಲೈನ್‌ನಲ್ಲಿ ಗ್ರಾಹಕರನ್ನು ದಾರಿ ತಪ್ಪಿಸುವ ಡಾರ್ಕ್ ಪ್ಯಾಟರ್ನ್ ಅಕ್ರಮಗಳನ್ನು ತಡೆಗಟ್ಟಲು ಕಠಿಣ ಕ್ರಮ ಕೈಗೊಂಡಿದೆ. ಈ ನಿಯಮಗಳನ್ನು ಉಲ್ಲಂಘಿಸಿದ 9 ಪ್ರಮುಖ ಡಿಜಿಟಲ್ ಕಂಪನಿಗಳಿಗೆ ಒಟ್ಟು 20 ಲಕ್ಷ ರೂಪಾಯಿ ದಂಡ ವಿಧಿಸಿ ಶಾಕ್ ನೀಡಿದೆ.

ಆರಂಭದಲ್ಲಿ ಕಡಿಮೆ ದರ ತೋರಿಸಿ, ನಂತರ ಹ್ಯಾಂಡ್ಲಿಂಗ್ ಅಥವಾ ಸದಸ್ಯತ್ವ ಶುಲ್ಕಗಳನ್ನು ಆಟೋಮ್ಯಾಟಿಕ್ ಆಗಿ ಸೇರಿಸಿದ ಜೆಪ್ಟೋ ಕಂಪನಿಗೆ 7 ಲಕ್ಷ ರೂ. ದಂಡ ವಿಧಿಸಲಾಗಿದೆ. ಫಿಸಿಕ್ಸ್ ವಾಲಾ ಕಂಪನಿಗೆ 5 ಲಕ್ಷ ರೂ. ದಂಡ ಹಾಕಲಾಗಿದ್ದು, ಇದು ಚೆಕೌಟ್ ಸಮಯದಲ್ಲಿ ದೇಣಿಗೆಯನ್ನು ಪೂರ್ವಭಾವಿಯಾಗಿ ಆಯ್ಕೆ ಮಾಡುತ್ತಿತ್ತು. ಸ್ಪೈಸ್ ಜೆಟ್ ಕಂಪನಿಗೆ 1 ಲಕ್ಷ ರೂ. ದಂಡ ವಿಧಿಸಿದ್ದು, ಆಟೋಮ್ಯಾಟಿಕ್ ಲಾಯಲ್ಟಿ ಪ್ರೋಗ್ರಾಂ ನೋಂದಣಿ ಮತ್ತು ಪ್ರಚಾರ ಸಂದೇಶಗಳಿಗೆ ಬಲವಂತದ ಸಮ್ಮತಿ ಪಡೆಯುತ್ತಿತ್ತು. ಅನುಜ್ ಜಿಂದಾಲ್, ಫಸ್ಟ್ ಕ್ರೈ, ಫಾರ್ಮ್ ಈಸಿ ಮತ್ತು ಮೆಕಾಫಿ ಕಂಪನಿಗಳಿಗೂ ದಂಡ ವಿಧಿಸಲಾಗಿದೆ. ಗ್ರಾಹಕರ ಹಿತಾಸಕ್ತಿ ಕಾಪಾಡಲು ಈ ಕ್ರಮ ಮಹತ್ವದ್ದಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More