ಚಾಂಪಿಯನ್ ಪಟ್ಟ ಅಲಂಕರಿಸಿದ ಝಿಂಬಾಬ್ವೆ
T20 World Cup 2026: ಭಾರತ, ಶ್ರೀಲಂಕಾ, ಪಾಕಿಸ್ತಾನ್, ಬಾಂಗ್ಲಾದೇಶ್, ಆಸ್ಟ್ರೇಲಿಯಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಐರ್ಲೆಂಡ್, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಸೌತ್ ಆಫ್ರಿಕಾ, ಯುಎಸ್ಎ, ಕೆನಡಾ, ನೆದರ್ಲೆಂಡ್ಸ್, ಇಟಲಿ, ನಮೀಬಿಯಾ, ಝಿಂಬಾಬ್ವೆ. ಇನ್ನೂ 3 ತಂಡಗಳಿಗೆ ಅವಕಾಶವಿದ್ದು, ಇದಕ್ಕಾಗಿ ಏಷ್ಯಾ/ಪೂರ್ವ ಏಷ್ಯಾ-ಪೆಸಿಫಿಕ್ ಪ್ರಾದೇಶಿ ತಂಡಗಳ ನಡುವೆ ಪೈಪೋಟಿ ನಡೆಯುತ್ತಿದೆ.
ಐಸಿಸಿ ಟಿ20 ವಿಶ್ವಕಪ್ನ ಅರ್ಹತಾ ಸುತ್ತಿನ ಆಫ್ರಿಕಾ ವಿಭಾಗದ ಫೈನಲ್ ಪಂದ್ಯದಲ್ಲಿ ಝಿಂಬಾಬ್ವೆ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಹರಾರೆಯಲ್ಲಿ ನಡೆದ ನಮೀಬಿಯಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಝಿಂಬಾಬ್ವೆ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ನಮೀಬಿಯಾ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿದ್ದರು.
168 ರನ್ಗಳ ಗುರಿ ಬೆನ್ನತ್ತಿದ ಝಿಂಬಾಬ್ವೆ ಪರ ಆರಂಭಿಕ ದಾಂಡಿಗ ಮರುಮಣಿ ಅಜೇಯ 74 ರನ್ ಬಾರಿಸಿದರೆ, ಡಿಯಾನ್ ಮೇಯರ್ಸ್ 44 ರನ್ಗಳ ಕೊಡುಗೆ ನೀಡಿದರು. ಈ ಮೂಲಕ 19.2 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು ಝಿಂಬಾಬ್ವೆ ತಂಡ 171 ರನ್ಗಳಿಸಿ ಭರ್ಜರಿ ಜಯ ಸಾಧಿಸಿದೆ.
ಈ ಚಾಂಪಿಯನ್ ಪಟ್ಟದೊಂದಿಗೆ ಝಿಂಬಾಬ್ವೆ ತಂಡವು ಮುಂಬರುವ ಟಿ20 ವಿಶ್ವಕಪ್ಗೆ ಅರ್ಹತೆ ಪಡೆದುಕೊಂಡಿದೆ. ಹಾಗೆಯೇ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದ ನಮೀಬಿಯಾ ಕೂಡ ಚುಟುಕು ವಿಶ್ವಕಪ್ಗೆ ಎಂಟ್ರಿ ಕೊಡುವಲ್ಲಿ ಯಶಸ್ವಿಯಾಗಿದೆ. ಅದರಂತೆ 2026ರ ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿಯಲಿರುವ ತಂಡಗಳು ಈ ಕೆಳಗಿನಂತಿವೆ…
ಭಾರತ, ಶ್ರೀಲಂಕಾ, ಪಾಕಿಸ್ತಾನ್, ಬಾಂಗ್ಲಾದೇಶ್, ಆಸ್ಟ್ರೇಲಿಯಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಐರ್ಲೆಂಡ್, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಸೌತ್ ಆಫ್ರಿಕಾ, ಯುಎಸ್ಎ, ಕೆನಡಾ, ನೆದರ್ಲೆಂಡ್ಸ್, ಇಟಲಿ, ನಮೀಬಿಯಾ, ಝಿಂಬಾಬ್ವೆ. ಇನ್ನೂ 3 ತಂಡಗಳಿಗೆ ಅವಕಾಶವಿದ್ದು, ಇದಕ್ಕಾಗಿ ಏಷ್ಯಾ/ಪೂರ್ವ ಏಷ್ಯಾ-ಪೆಸಿಫಿಕ್ ಪ್ರಾದೇಶಿ ತಂಡಗಳ ನಡುವೆ ಪೈಪೋಟಿ ನಡೆಯುತ್ತಿದೆ.
