Bengaluru
    Bengaluru 22 Oct, 02:30 PM
    28°C

    Humidity 55%

    Wind N/A

    Sunrise

    Sunrise

    06:11 am

    Sunset

    Sunset

    05:57 pm

    Moonrise

    Moonrise

    10:32 pm

    Moonset

    Moonset

    11:00 am

    Next 6 days Min Max

    23 Oct (Wed)

    2024-10-23 WedGenerally cloudy sky with one or two spells of rain or thundershowers
    20.0°c 28.0°c

    24 Oct (Thu)

    2024-10-24 ThuGenerally cloudy sky with one or two spells of rain or thundershowers
    20.0°c 28.0°c

    25 Oct (Fri)

    2024-10-25 FriGenerally cloudy sky with Light rain
    21.0°c 28.0°c

    26 Oct (Sat)

    2024-10-26 SatGenerally cloudy sky
    21.0°c 28.0°c

    27 Oct (Sun)

    2024-10-27 SunGenerally cloudy sky
    21.0°c 28.0°c

    ಬೆಂಗಳೂರಿನಲ್ಲಿ ಅಕ್ಟೋಬರ್ 28ರವರೆಗೂ ಭಾರಿ ಮಳೆ, ಯೆಲ್ಲೋ ಅಲರ್ಟ್​

    ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಕರ್ನಾಟಕದ ಮೇಲೂ ಭಾರಿ ಪರಿಣಾಮ ಬೀಳುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

    ಒಡಿಶಾಗೆ ಅಪ್ಪಳಿಸಲಿದೆ ಡಾನಾ ಚಂಡಮಾರುತ; ಹವಾಮಾನ ಇಲಾಖೆಯಿಂದ ಹೈ ಅಲರ್ಟ್​

    ಬಂಗಾಳಕೊಲ್ಲಿಯಲ್ಲಿ ಉಂಟಾಗಲಿರುವ ಚಂಡಮಾರುತದ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರವು ಅಕ್ಟೋಬರ್ 23ರಿಂದ ಅಕ್ಟೋಬರ್ 25ರವರೆಗೆ ಪ್ರವಾಹ ಉಂಟಾಗುವ ಸಾಧ್ಯತೆಯಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದೆ. ಇಂದಿನಿಂದಲೇ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೈ ಅಲರ್ಟ್ ಘೋಷಿಸಿದೆ.

    ಮಳೆಗೆ ಬೆಂಗಳೂರಿನ ಕೆರೆಗಳಿಗೆ ಜೀವಕಳೆ: ಮೈದುಂಬಿದ 40 ಕೆರೆಗಳು

    ಸಿಲಿಕಾನ್ ಸಿಟಿಯಲ್ಲಿ ಕಳೆದೊಂದು ವಾರದಿಂದ ಮಳೆರಾಯನ ಅಬ್ಬರ ಜೋರಾಗ್ತಿದೆ. ವರುಣನ ಆರ್ಭಟಕ್ಕೆ ಬೆಂಗಳೂರಿನ ಬೀದಿಬೀದಿಗಳಲ್ಲಿ ವರುಣನ ಎಂಟ್ರಿಯಿಂದ ನೀರು ಉಕ್ಕಿ ಹರಿಯುತ್ತಿವೆ. ಇತ್ತ ಬಿರು ಬೇಸಿಗೆಯಿಂದ ಬತ್ತಿಹೋಗಿದ್ದ ರಾಜಧಾನಿಯ ಕೆರೆಗಳಿಗೆ ಮರುಜೀವ ಬಂದಿದೆ. ಕಳೆದ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಸುಸ್ತಾಗಿದ್ದ ಸಿಟಿಮಂದಿಗೆ ಈ ಬಾರೀ ಕೆರೆಗಳು ಮೈದುಂಬಿರೋದು ಅಂತರ್ಜಲ ಹೆಚ್ಚಿಸಿ ವರವಾಗೋ ಲಕ್ಷಣ ಕಾಣುತ್ತಿದ್ರೆ. ಮತ್ತೊಂದೆಡೆ ತುಂಬಿದ ಕೆರೆಗಳಿಂದ ಅಪಾಯ ಆಗದಂತೆ ತಡೆಯೋಕೆ ಪಾಲಿಕೆ ಕಸರತ್ತು ನಡೆಸಿದೆ.

    ಬೆಂಗಳೂರು: ಮಳೆಯಿಂದ ರಸ್ತೆಗಳಲ್ಲಿ ನಿಂತ ನೀರು, ವಾಹನ ಸಂಚಾರಕ್ಕೆ ಅಡಚಣೆ

    ಬೆಂಗಳೂರು ನಗರದಲ್ಲಿ ನಸುಕಿನ ಜಾವ ಮಳೆರಾಯನ ಆರ್ಭಟ ಜೋರಾಗಿತ್ತು. ಇದೀಗ ಮಳೆ ಸ್ವಲ್ಪ ಕಡಿಮೆಯಾಗಿದ್ದು, ಜಿಟಿ ಜಿಟಿ ಮಳೆಯಾಗುತ್ತಿದೆ. ಮಳೆಯಿಂದ ನಗರದ ಹಲವಡೆ ಅವಾಂತರ ಸೃಷ್ಟಿಯಾಗಿದೆ. ರಸ್ತೆಗಳಲ್ಲಿ ನೀರು ನಿಂತಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಹಾಗಿದ್ದರೆ ಯಾವ ರಸ್ತೆಯಲ್ಲಿ ನೀರು ನಿಂತಿದೆ, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ? ಇಲ್ಲಿದೆ ಮಾಹಿತಿ

    ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು

    ಬೆಂಗಳೂರು ನಗರದಲ್ಲಿ ಬೆಳ್ಳಂ ಬೆಳಗ್ಗೆ ಮಳೆರಾಯನ ಆರ್ಭಟ ಜೋರಾಗಿತ್ತು. ಮಳೆಯಿಂದ ನಗರದ ಹಲವಡೆ ಅವಾಂತರ ಸೃಷ್ಟಿಯಾಗಿದೆ. ಮಳೆಯಿಂದಾಗಿ ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ರಸ್ತೆ ಜಲಾವೃತದಿಂದ ಸಿಲ್ಕ್​ಬೋರ್ಡ್​ ಜಂಕ್ಷನ್ ಬಳಿ ಟ್ರಾಫಿಕ್​​ ಜಾಮ್​​ ಆಗಿದೆ

    ಬೆಂಗಳೂರಿನಲ್ಲಿ ಬೆಳಗಿನ ಜಾವದಿಂದ ಗುಡುಗು ಸಹಿತ ಮಳೆ

    ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಬೆಳಗಿನ ಜಾವ ಗುಡುಗು ಸಹಿತ ಮಳೆಯಾಗಿದೆ. ಬೆಂಗಳೂರು, ಬೆಂಗಳೂರು ನಗರ,ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

    ಬೆಂಗಳೂರಿನಲ್ಲಿ ನಿರಂತರ ಮಳೆಯಿಂದ ಸೊಳ್ಳೆಗಳ ಸಂತತಿ ಹೆಚ್ಚಳ: ರೋಗ ಭೀತಿ

    ಸಿಲಿಕಾನ್ ಸಿಟಿ ಬೆಂಗಳೂರು ಮಳೆಯೂರು ಆಗಿ ಬದಲಾಗಿದೆ.. ಕಳೆದ ಎರಡು ದಿನದಿಂದ ಧೋ ಅಂತ ಮಳೆ ಸುರಿಯುತ್ತಿದ್ದು, ನಗರದ ಬಹುತೇಕ ರಸ್ತೆಗಳು ಮಳೆ ನೀರಿನಿಂದ ತುಂಬಿ ನದಿಯಂತಾಗಿದ್ದವು. ಅಲ್ಲದೇ ಮನೆಗಳಿಗೆ ನುಗ್ಗಿ ಭಾರೀ ಅವಾಂತರಗಳು ಸೃಷ್ಟಿಸಿತ್ತು. ಇದೀಗ ಮಳೆರಾಯ ಕೊಂಡ ಬಿಡುವು ಕೊಟ್ಟಿದ್ದು, ರಾಜಧಾನಿ ಈಗ ಸಹಜ ಸ್ಥಿತಿಗೆ ಮರಳುತ್ತಿದೆ. ಆದ್ರೆ, ಮಳೆ ಎಫೆಕ್ಟ್ ನಿಂದ ಜನರಿಗೆ ಖಾಯಿಲೆಗಳು ಒಕ್ಕರಿಸೂ ಆತಂಕ ಎದುರಾಗಿದೆ.

    ಬೆಂಗಳೂರಿಗೆ ಆರೆಂಜ್ ಅಲರ್ಟ್​, ಅಕ್ಟೋಬರ್ 23ರವರೆಗೂ ಮಳೆ

    ದೀಪಾವಳಿವರೆಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುಂದುವರೆಯಲಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಆರೆಂಜ್ ಅಲರ್ಟ್​ ಘೊಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

    ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ

    ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮದಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಚೆನ್ನೈನ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಭಾರೀ ಮಳೆಗೆ ಸಂಬಂಧಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸತ್ಯಭಾಮಾ ಇಂಜಿನಿಯರಿಂಗ್ ಕಾಲೇಜು ನೀರಿನಲ್ಲಿ ಮುಳುಗಿರುವ ದೃಶ್ಯಗಳು ವೈರಲ್ ಆಗುತ್ತಿವೆ.

    ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಅ.20ರವರೆಗೆ ಭಾರಿ ಮಳೆ

    ಕರ್ನಾಟಕದ ವಿವಿಧೆಡೆ ಭಾರಿ ಮಳೆಯಾಗುತ್ತಿದೆ, ಬೆಂಗಳೂರಿನಲ್ಲಿ ಅಕ್ಟೋಬರ್ 20ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ವಿಪರೀತ ಮಳೆಯಾಗುತ್ತಿದೆ, ಬಂಗಳಾಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ.

    ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
    ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
    ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
    ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
    ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
    ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
    ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
    ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
    ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
    ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
    ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
    ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
    ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
    ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
    ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
    ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
    ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
    ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
    ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
    ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್