Bengaluru
    Oops Sorry! Currently We don't have any updated weather information for selected city.

    ಕರ್ನಾಟಕದಾದ್ಯಂತ ಶೀತ ಗಾಳಿ, ಒಣಹವೆ ಮುಂದುವರಿಕೆ

    ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಶೀತಗಾಳಿ ಶುರುವಾಗಿದ್ದು, ಮುಂದಿನ ಐದು ದಿನಗಳ ಕಾಲ ಕನಿಷ್ಠ ಉಷ್ಣಾಂಶದಲ್ಲಿ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗಲಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರೌಆಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಚಳಿ ಇರಲಿದೆ.

    ಬೆಂಗಳೂರು ಸೇರಿ ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದು ಮಳೆಯ ಮುನ್ಸೂಚನೆ

    ಕಳೆದ ಡಿಸೆಂಬರ್​ನಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ನಾನಾ ಭಾಗಗಳಲ್ಲಿ ಮಳೆಯಾಗಿತ್ತು. ಈಗ ಮತ್ತೊಂದು ಚಂಡಮಾರುತವು ಅಪ್ಪಳಿಸಲಿದ್ದು, ಕರ್ನಾಟಕ ಮಾತ್ರವಲ್ಲ ಬೇರೆ ರಾಜ್ಯಗಳಲ್ಲಿ ಕೂಡ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ನಿನ್ನೆಯಿಂದ ಮೋಡ ಕವಿದ ವಾತಾವಾರಣವಿದೆ. ಇಂದು ಮಳೆಯಾಗುವ ನಿರೀಕ್ಷೆಯಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜನವರಿ 18 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಚಂಡಮಾರುತದಿಂದಾಗಿ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

    ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಇಂದು ಮಳೆ

    ಕರ್ನಾಟಕದಲ್ಲಿ ಚಳಿ ಮುಂದುವರೆದಿದೆ, ಕೆಲವೆಡೆ ಮಳೆಯಾಗುವ ಸಾಧ್ಯತೆಯೂ ಇದೆ, ಬೆಂಗಳೂರಿನಲ್ಲಿ ಮೋಡ, ಬಿಸಿಲಿನ ಆಟ ನಡೆಯುತ್ತಿದೆ. ಉತ್ತರ ಒಳನಾಡಿನಲ್ಲಿ ಚಳಿಯ ಪ್ರಮಾಣ ಹೆಚ್ಚಿದೆ, ದಕ್ಷಿಣ ಒಳನಾಡಿನಲ್ಲೂ ಇಂದಿನಿಂದ ಚಳಿ ಹೆಚ್ಚಾಗಿದೆ. ವಿಜಯಪುರದಲ್ಲಿ 15 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಶೃಂಗೇರಿ, ಕೋಲಾರದಲ್ಲಿ ಮಳೆಯಾಗಿದೆ.ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.

    ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ, 15 ಜಿಲ್ಲೆಗಳಲ್ಲಿ ಮಳೆ

    ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲಾಗುತ್ತಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮಳೆ ಶುರುವಾಗಿದೆ. ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು, ತುಂತುರು ಮಳೆ ಶುರುವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

    ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜ.14ರಿಂದ ಮಳೆ

    ಕರ್ನಾಟಕದಾದ್ಯಂತ ಚಳಿ ಮುಂದುವರೆದಿದೆ, ಅದರ ಬೆನ್ನಲ್ಲೇ ಚಂಡಮಾರುತದ ಆಗಮನವೂ ಆಗುತ್ತಿದ್ದು, ಸಂಕ್ರಾಂತಿಯಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.ಶ್ರೀಲಂಕಾದ ಪೂರ್ವ ಕರಾವಳಿ ಮತ್ತು ಅದಕ್ಕೆ ಹೊಂದಿಕೊಂಡಿರುವ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಮುಂದುವರೆದಿದೆ.

    ಬೆಂಗಳೂರು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

    ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮೋಡಕವಿದ ವಾತಾವರಣವಿದ್ದು, ಚಳಿಯ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಜನವರಿ 14 ರಿಂದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

    ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಂಕ್ರಾಂತಿಯಿಂದ ಎರಡು ದಿನಗಳ ಕಾಲ ಮಳೆ

    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನವರಿ 14ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆೇಂಗಳೂರು ನಗರ, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಮತ್ತಷ್ಟು ಇಳಿಕೆ ಸಾಧ್ಯತೆ

    ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಪ್ರಮಾಣ ಹೆಚ್ಚಾಗುತ್ತಿದೆ. ಅದರಲ್ಲೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ದಿನದಿಂದ ದಿನಕ್ಕೆ ಇಳಿಯುತ್ತಿದೆ. ಬೆಂಗಳೂರಿನಲ್ಲೂ ಬೆಳಿಗ್ಗೆಯಿಂದಲೇ ಮೋಡ ಹಾಗೂ ಮಂಜಿನ ವಾತಾವರಣ ಕಂಡು ಬಂದಿದೆ. ಕಳೆದ ಮೂರು ತಿಂಗಳಿಂದ ಕರ್ನಾಟಕದಲ್ಲಿ ಧಾರಾಕಾರ ಮಳೆ ಸುರಿದು ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಸದ್ಯ ರಾಜ್ಯದಲ್ಲಿ ಶೀತಗಾಳಿ ಕೂಡ ಬೀಸುತ್ತಿದ್ದು, ಸಂಜೆಯಿಂದಲೇ ಚುಮುಚುಮು ಚಳಿ ಕಾಡುತ್ತಿದೆ.

    ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು

    ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಮುಂದುವರೆದಿದ್ದು ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಇದೆ. ಚಿಕ್ಕಬಳ್ಳಾಪುರದಲ್ಲಿ ರಸ್ತೆ ಕಾಣದಷ್ಟು ಮಂಜು ಆವರಿಸಿತ್ತು. ಫಾಗ್​ನಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಟ ಪಡುವಂತಾಯಿತು. ವಿಡಿಯೋ ಇಲ್ಲಿದೆ ನೋಡಿ.

    ಕರ್ನಾಟಕದ ಉತ್ತರ ಒಳನಾಡಿನಲ್ಲಿ ವಿಪರೀತ ಚಳಿ

    ಕರ್ನಾಟಕದಾದ್ಯಂತ ಚಳಿ ಹೆಚ್ಚಾಗುತ್ತಿದೆ. ವಿಜಯಪುರದಲ್ಲಿ 10.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನಲ್ಲಿ ಕನಿಷ್ಠ ಉಷ್ಣಾಂಶ 10 ಡಿಗ್ರಿ ಸೆಲ್ಸಿಯಸ್​ಗಿಂತ ಕಡಿಮೆಯಾಗುವ ನಿರೀಕ್ಷೆ ಇದೆ ಇದೆ. ಅಷ್ಟೇ ಅಲ್ಲದೆ ಉತ್ತ ಕನ್ನಡದಲ್ಲಿ ಕನಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 3.5 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ನಿರೀಕ್ಷೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಚಳಿಯ ಅನುಭವವಾಗುತ್ತಿದೆ.

    ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
    ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
    ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
    ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
    ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
    ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
    ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
    ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
    ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
    ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
    ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
    ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
    ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
    ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
    ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
    ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
    ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
    ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
    ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
    ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ