Hyderabad
    Hyderabad 28 Sep, 11:30 AM
    29.8°C

    Humidity 62%

    Wind 1.9 KMPH

    Sunrise

    Sunrise

    06:06 am

    Sunset

    Sunset

    06:08 pm

    Moonrise

    Moonrise

    02:20 am

    Moonset

    Moonset

    03:38 pm

    Next 6 days Min Max

    29 Sep (Sun)

    2024-09-29 SunGenerally cloudy sky with Light Rain or Drizzle
    23.0°c 30.0°c

    30 Sep (Mon)

    2024-09-30 MonGenerally cloudy sky with one or two spells of rain or thundershowers
    24.0°c 32.0°c

    01 Oct (Tue)

    2024-10-01 TueGenerally cloudy sky with one or two spells of rain or thundershowers
    25.0°c 33.0°c

    02 Oct (Wed)

    2024-10-02 WedGenerally cloudy sky with Light Rain or Drizzle
    25.0°c 34.0°c

    03 Oct (Thu)

    2024-10-03 ThuRain or Thundershowers
    25.0°c 34.0°c

    ಕರ್ನಾಟಕದ ಕರಾವಳಿಯಲ್ಲಿ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್​

    ಈ ವರ್ಷ ಬೇಸಿಗೆಯಲ್ಲಿ ಬಿಸಿಲ ಝಳ ಹೆಚ್ಚಿದ್ದಂತೆ ಮಳೆಯೂ ಕೂಡ ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

    ಮಹಾರಾಷ್ಟ್ರದಾದ್ಯಂತ ಭಾರಿ ಮಳೆ, ಪ್ರಧಾನಿ ಮೋದಿ ಪುಣೆ ಭೇಟಿ ರದ್ದು

    ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಪುಣೆ ಭೇಟಿ ರದ್ದುಗೊಂಡಿದೆ. ಪುಣೆಯಲ್ಲಿ ನಿರ್ಮಾಣವಾಗಿರುವ ಮೆಟ್ರೋ ಮಾರ್ಗದ ಉದ್ಘಾಟನೆಗೆ ಪ್ರಧಾನಿ ಬರಬೇಕಿತ್ತು. ಭಾರಿ ಮಳೆ ಹಿನ್ನೆಯಲ್ಲಿ ಮುಂಬೈಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

    ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಎರಡು ದಿನ ಭಾರಿ ಮಳೆ

    ಇನ್ನೇನು ಮುಂಗಾರು ಕಡಿಮೆಯಾಯಿತು ಎನ್ನುವಾಗ ಕರ್ನಾಟಕದ ಹಲವೆಡೆ ಮತ್ತೆ ಅಬ್ಬರ ಹೆಚ್ಚಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

    ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ 3 ದಿನ ಜೋರು ಮಳೆ

    ಕರ್ನಾಟಕದಲ್ಲಿ ಮತ್ತೆ ಮಳೆ ಜೋರಾಗಲಿದ್ದು, 17 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

    ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಹೆಚ್ಚಲಿದೆ ಮಳೆಯ ಅಬ್ಬರ, ರೆಡ್ ಅಲರ್ಟ್​

    ಕರ್ನಾಟಕದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

    ಬೆಂಗಳೂರು ಸೇರಿ ಕರ್ನಾಟಕದ 20 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​

    ಕರ್ನಾಟಕದ 20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

    ಬೆಂಗಳೂರಿನಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಳ‌

    ಕರ್ನಾಟಕ ರಾಜ್ಯದಲ್ಲಿ ಮಳೆಗಾಲವಿದ್ದರೂ ಹವಾಮಾನ ಮಾತ್ರ ಬೇಸಿಗೆಯ ಫೀಲ್ ಕೊಡುತ್ತಿದ್ದು, ಬಿಸಿಲಿನ ತಾಪಮಾನ ಮಾತ್ರ ನೆತ್ತಿ ಸುಡುತ್ತಿದೆ.‌ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಳ‌ವಾಗಿದೆ. ಮಳೆಗಾಲದಲ್ಲಿಯೂ 32 ಡಿಗ್ರಿಯಷ್ಟು ಬಿಸಿಲು ದಾಖಲಾಗಿದೆ. ಮಳೆಗಾಲದಲ್ಲಿಯೂ ಬಿಸಿಲಿನ ಫೀಲ್ ಆಗುತ್ತಿದ್ದು, ಸ್ಕಿನ್ ಮೇಲೂ ಸಾಕಷ್ಟು ಪರಿಣಾಮ ಬೀರುತ್ತಿದೆ. ಜನರು ಆರೋಗ್ಯದ ಮೇಲೆ ನಿಗಾ ವಹಿಸಬೇಕಾಗಿದೆ.

    ಕರ್ನಾಟಕದ ಉತ್ತರ ಒಳನಾಡಿನಲ್ಲಿ ಹೆಚ್ಚಲಿದೆ ಮಳೆ, ಯೆಲ್ಲೋ ಅಲರ್ಟ್​

    ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

    ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು

    ಬಿಹಾರದಲ್ಲಿ ಮತ್ತೊಮ್ಮೆ ಪ್ರವಾಹದ ಭೀತಿ ಎದುರಾಗಿದೆ. ಗಂಗಾ ನದಿ ಉಕ್ಕಿ ಹರಿಯುತ್ತಿದ್ದು, ಮನೆಗಳನ್ನು ತೊರೆದು ಪ್ರವಾಹ ಸಂತ್ರಸ್ತರು ಎತ್ತರದ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದಾರೆ. ಇದುವರೆಗೂ ಆಡಳಿತದಿಂದ ಯಾವುದೇ ನೆರವು ಸಿಕ್ಕಿಲ್ಲ ಎನ್ನುತ್ತಾರೆ ಪ್ರವಾಹ ಸಂತ್ರಸ್ತರು.

    ಸೆ. 24ರಿಂದ ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮತ್ತೆ ಮಳೆ

    ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರಿಂದ ಮತ್ತೆ ಮಳ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲಿ ಮಳೆಯಾಗಲಿದೆ.