ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ‌ಅಂಚೆ ಕಚೇರಿ ಲೋಕಾರ್ಪಣೆ

18 August 2023

ಇಂದು(ಆ.18) ಅಲಸೂರು ಸಮೀಪದ ಜೋಗುಪಾಳ್ಯದ ಬಳಿ 3ಡಿ ಮುದ್ರಿತ ‌ಅಂಚೆ ಕಚೇರಿಯನ್ನು ಲೋಕಾರ್ಪಣೆಗೊಳಿಸಲಾಯಿತು.

18 August 2023

ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್‌  ಅಂಚೆ ಕಚೇರಿಯನ್ನು ಉದ್ಘಾಟಿಸಿದರು.

18 August 2023

ಈ 3ಡಿ ಮುದ್ರಿತ ‌ಅಂಚೆ ಕಚೇರಿಗೆ “ಕೇಂಬ್ರಿಡ್ಜ್ ಲೇಔಟ್ ಪಿಒ” ಎಂದು ಹೆಸರಿಸಲಾಗಿದೆ.

18 August 2023

ಇದೇ ವರ್ಷ ಮಾರ್ಚ್ 21 ರಿಂದ ನಿರ್ಮಾಣದ ಕಾರ್ಯ ಆರಂಭವಾಗಿದ್ದು 44 ದಿನಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ.

18 August 2023

“ಎಲ್ & ಟಿ (ಲಾರ್ಸೆನ್ ಮತ್ತು ಟೂಬ್ರೊ) ನಿರ್ಮಿಸಿರುವ ಕಟ್ಟಡವು ಸುಮಾರು 1,100 ಚದರ ಅಡಿ ವಿಸ್ತೀರ್ಣದಲ್ಲಿದೆ.

18 August 2023

3ಡಿ ತಂತ್ರಜ್ಞಾನ ಅಳವಡಿಸಲು ತೆರಿಗೆ ಸೇರಿ ಸುಮಾರು 26 ಲಕ್ಷ ರೂ ಹಾಗೂ ಇತರ ವೆಚ್ಚಗಳು ಸೇರಿ ಸುಮಾರು 40 ಲಕ್ಷ ರೂಪಾಯಿ ಖರ್ಚಾಗಿದೆ.

18 August 2023

ಈ ತಂತ್ರಜ್ಞಾನ ಬಳಕೆಯಿಂದ ಕಟ್ಟಡ ನಿರ್ಮಾಣ ವೆಚ್ಚ ಮತ್ತು ಸಮಯ ಎರಡೂ ಬಹಳ ಉಳಿತಾಯವಾಗುತ್ತದೆ ಎಂದು ತಿಳಿದುಬಂದಿದೆ.

18 August 2023