ಫೆಬ್ರವರಿ 23ರಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿಲಿದ್ದಾರೆ.

ದೆಹಲಿಯಿಂದ ಮಧ್ಯಾಹ್ನ 12.50ಕ್ಕೆ ಹುಬ್ಬಳ್ಳಿ ಏರ್‌ಪೋರ್ಟ್‌ಗೆ ಆಗಮಿಸುತ್ತಾರೆ. 

ನಂತರ ಹೆಲಿಕಾಪ್ಟರ್‌ನಲ್ಲಿ ಹುಬ್ಬಳ್ಳಿಯಿಂದ ಸಂಡೂರಿಗೆ ಪ್ರಯಾಣ ಬೆಳಸಲಿದ್ದಾರೆ.

ಮಧ್ಯಾಹ್ನ 1.30ಕ್ಕೆ ಬಳ್ಳಾರಿ ಜಿಲ್ಲೆ ಸಂಡೂರಿನ ಸಮಾವೇಶ ಸ್ಥಳಕ್ಕೆ ತೆರಳುತ್ತಾರೆ. 

ಮಧ್ಯಾಹ್ನ 1.30ರಿಂದ 2.30ರವರೆಗೆ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗುತ್ತಾರೆ.

ಮಧ್ಯಾಹ್ನ 2.30ರಿಂದ 3.45ರವರೆಗೆ ಬಳ್ಳಾರಿ ಜಿಲ್ಲಾ ಬಿಜೆಪಿ ಮುಖಂಡರ ಸಭೆ ನಡೆಸುತ್ತಾರೆ.

ಮಧ್ಯಾಹ್ನ 3.55ಕ್ಕೆ ಸಂಡೂರಿನಿಂದ ಜಕ್ಕೂರು ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ.  

ಸಂಜೆ 5.10ಕ್ಕೆ ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್‌ಗೆ ಹೋಗುತ್ತಾರೆ.  

ಸಂಜೆ 6-7 ಗಂಟೆಯವರೆಗೆ ಖಾಸಗಿ ಹೋಟೆಲ್‌ನಲ್ಲಿ ಅಮಿತ್ ಶಾ ಸಂವಾದ ನಡೆಸುತ್ತಾರೆ. 

ರಾತ್ರಿ 8 ಗಂಟೆಗೆ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಶಾಸಕರು, MLCಗಳ ಜೊತೆ ಸಭೆ ಮಾಡುತ್ತಾರೆ.  

ರಾತ್ರಿ ರೇಸ್‌ ಕೋರ್ಸ್ ರಸ್ತೆಯ ಹೋಟೆಲ್‌ನಲ್ಲಿ ಅಮಿತ್‌ ಶಾ ವಾಸ್ತವ್ಯ ಹೂಡಲಿದ್ದಾರೆ. 

ಫೆಬ್ರವರಿ  24ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ದೆಹಲಿಗೆ ವಾಪಸ್ ಆಗಲಿದ್ದಾರೆ.