Ganapathi Sharma
08 Jan 2025
ಬೆಂಗಳೂರಿನಲ್ಲಿ ಇನ್ನಷ್ಟು ಹೆಚ್ಚಾಗಲಿದೆ ಚಳಿ
ಮಂಗಳವಾರ ಬೆಳಗ್ಗೆ ಹೆಸರಘಟ್ಟದಲ್ಲಿ 11.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲು
ಹೆಸರಘಟ್ಟದಲ್ಲಿ ದಾಖಲಾಗಿರುವುದು ಜನವರಿ 2025 ರಲ್ಲಿ ಈವರೆಗಿನ ಕನಿಷ್ಠ ತಾಪಮಾನವಾಗಿದೆ.
ಬೆಂಗಳೂರಿನಲ್ಲಿ 14.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಮುಂಬರುವ ದಿನಗಳಲ್ಲಿ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 11 ರಿಂದ 14 ಡಿಗ್ರಿ ಸೆಲ್ಸಿಯಸ್ ವರೆಗೆ ಇಳಿಕೆಯಾಗುವ ಮುನ್ಸೂಚನೆ ಇದೆ.
ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ ಕಡಿಮೆಯಾಗುತ್ತಿರುವುದು ಇದೇ ಮೊದಲಲ್ಲ ಎಂದು ಐಎಂಡಿ ಹೇಳಿದೆ.
ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶೀತ ಮಾರುತದಿಂದಾಗಿ ಬೆಂಗಳೂರಿನಲ್ಲಿ ಚಳಿ ಹೆಚ್ಚಾಗುವ ಸಾಧ್ಯತೆ ಇದೆ.
ಈ ಹಿಂದೆ 2012 ರ ಜನವರಿ 16 ರಂದು ಬೆಂಗಳೂರು ನಗರದಲ್ಲಿ ತಾಪಮಾನವು 12 ಡಿಗ್ರಿ ಸೆಲ್ಸಿಯಸ್ಗೆ ಇಳಿಕೆಯಾಗಿತ್ತು.
ಜೈಲಿನಿಂದ ಹೊರಬಂದು ಬರ್ತ್ಡೇ ಆಚರಿಸಿಕೊಂಡ ಪವಿತ್ರಾ ಗೌಡ
ಮತ್ತಷ್ಟು ಓದಿ