ಬೆಂಗಳೂರು ನಗರದ ಹಲವೆಡೆ ಮಂಗಳವಾರ ಮಳೆಯಾಗಿದೆ.

By Vivek Biradar

13 May 2025

ಬೆಂಗಳೂರಿನಲ್ಲಿ ವರುಣಾರ್ಭಟ

ಮಳೆಯಿಂದ ನಗರದಲ್ಲಿ ಸಾಕಷ್ಟು ಅವಾಂತರ ಸೃಷ್ಟಿಯಾಗಿತ್ತು. ಮಳೆಗೆ ರಸ್ತೆಗಳೆಲ್ಲಾ ಕಾಲುವೆಯಂತಾಗಿದ್ದವು.

ಬೆಂಗಳೂರಿನಲ್ಲಿ ವರುಣಾರ್ಭಟ

ನಗರದ ವಿವಿಧೆಡೆ ಮರಗಳು ಬಿದ್ದು ಅವಾಂತರಗಳು ಸೃಷ್ಟಿಯಾಗಿದ್ದವು. ಕಾರುಗಳು ಜಖಂಗೊಂಡಿದ್ದವು.

ಬೆಂಗಳೂರಿನಲ್ಲಿ ವರುಣಾರ್ಭಟ

ಬಾಣಸವಾಡಿಯಲ್ಲಿ  ಬಿರುಗಾಳಿಯ ರಭಸಕ್ಕೆ ಮನೆಯ ಟೆರಸ್ ಮೇಲಿನ ಗಾರ್ಡನ್ ಚೆಲ್ಲಾಪಿಲ್ಲಿಯಾಗಿತ್ತು.

ಬೆಂಗಳೂರಿನಲ್ಲಿ ವರುಣಾರ್ಭಟ

ಮಾನತ್ಯಾ ಟೆಕ್ ಪಾರ್ಕ್‌ನಲ್ಲಿ ಜೋರು ಮಳೆಯಾಗಿದ್ದು, ರಸ್ತೆಯಲ್ಲಿ ನೀರು ನಿಂತ ಪರಿಣಾಮ ಟ್ರಾಫಿಕ್ ಜಾಮ್ ಆಗಿತ್ತು.

ಬೆಂಗಳೂರಿನಲ್ಲಿ ವರುಣಾರ್ಭಟ

ಮಾನ್ಯತಾ ಟೆಕ್ ಪಾರ್ಕ್ ಒಳಭಾಗದ ರಸ್ತೆಯಂತೂ ಸಂಪೂರ್ಣ ಜಲಾವೃತವಾಗಿತ್ತು.

ಬೆಂಗಳೂರಿನಲ್ಲಿ ವರುಣಾರ್ಭಟ

ಬಿಎಂಟಿಸಿ ಬಸ್‌ನ ಒಳಭಾಗಕ್ಕೆ ಮಳೆ ನೀರು ನುಗ್ಗಿತ್ತು. ಜಲಾವೃತವಾಗಿದ್ದ ಬಸ್​ನಲ್ಲಿ ಪ್ರಯಾಣಿಕರು ಕುಳಿತಿದ್ದರು.

ಬೆಂಗಳೂರಿನಲ್ಲಿ ವರುಣಾರ್ಭಟ

ಮಲ್ಲೇಶ್ವರದ ಪಿಯುಸಿ ಬೋರ್ಡ್, ಕಾವೇರಿ ಜಂಕ್ಷನ್ ಬಳಿ ಗಾಳಿ ಮಳೆಗೆ ಮರ ಏಕಾಏಕಿ ಬಿದ್ದಿತ್ತು.

ಬೆಂಗಳೂರಿನಲ್ಲಿ ವರುಣಾರ್ಭಟ

ನಿರಂತರ ಮಳೆಗೆ ರಸ್ತೆ ತುಂಬೆಲ್ಲಾ ನೀರು ತುಂಬಿಕೊಂಡಿತ್ತು, ವಾಹನ ಸವಾರರು ಪರದಾಡಿದ್ದರು.