T-20 ಕ್ರಿಕೆಟ್ ಪಂದ್ಯ: ನಮ್ಮ ಮೆಟ್ರೋ ರೈಲು ಸೇವೆಗಳ ವಿಸ್ತರಣೆ
01 Dec 2023
Author: Gangadhar Saboji
ಡಿಸೆಂಬರ್ 3 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ T-20 ಕ್ರಿಕೆಟ್ ಪಂದ್ಯ ನಡೆಯಲಿದೆ.
ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿರುವ 4 ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದಹೊರಡುವ ರೈಲು ಸೇವೆಯನ್ನು ರಾತ್ರಿ 11.45 ರವರೆಗೆ bmrcl ವಿಸ್ತರಿಸಿದೆ.
ಮರು ಪ್ರಯಾಣ ಪೇಪರ್ ಟಿಕೆಟ್ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಡಿ. 3 ರಂದು ಮಧ್ಯಾಹ್ನ ಎರಡು ಗಂಟೆಯಿಂದ ಲಭ್ಯವಿರುತ್ತದೆ.
ಪೇಪರ್ ಟಿಕೆಟ್‌ಗಳು ರಾತ್ರಿ 8 ಗಂಟೆಯಿಂದ ಕಬ್ಬನ್ ಪಾರ್ಕ್, ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಿಂದಯಾವುದೇ ಇತರೆ ಮೆಟ್ರೋ ನಿಲ್ದಾಣಕ್ಕೆ ದಿನದ ವಿಸ್ತ್ರತ ಅವಧಿಯಲ್ಲಿ ಒಂದು ಪ್ರಯಾಣಕ್ಕೆ ಮಾತ್ರ ಸೀಮಿತ ವಾಗಿರುತ್ತದೆ.
ಪೇಪರ್ ಟಿಕೆಟ್ ದರ 50 ರೂ. ಆಗಿದ್ದು, ಕ್ಯೂಆರ್ ಕೋಡ್ ಟಿಕೆಟ್‌ಗಳು ಸಾಮಾನ್ಯ ದರದ ಶೇ 5% ರಿಯಾಯಿತಿಯೊಂದಿಗೆ ಪಂದ್ಯದ ದಿನದಂದು ಖರೀದಿಸಿದರೆ ಇಡೀ ದಿನಕ್ಕೆ ಮಾನ್ಯವಾಗಿರುತ್ತದೆ.
ಕ್ರಿಕೆಟ್ ಪಂದ್ಯದ ಪ್ರಾರಂಭದ ಮೊದಲು ವ್ಯಾಟ್ಸ್ ಆ್ಯಪ್, ನಮ್ಮ ಮೆಟ್ರೋ ಆ್ಯಪ್, ಪೇ ಟಿಎಂ ಆ್ಯಪ್ನಲ್ಲಿ ಕ್ಯೂಆರ್ ಟಿಕೆಟ್‌ಗಳನ್ನು ಖರೀದಿಸಲು ಪ್ರಯಾಣಿಕರಿಗೆ ಸೂಚಿಸಲಾಗಿದೆ.
ಸ್ಮಾರ್ಟ್ ಕಾರ್ಡ್, NCMC ಕಾರ್ಡ್
ಗಳನ್ನು ಸಹ ಎಂದಿನಂತೆ ಬಳಸಬಹುದು. ವಿಸ್ತ್ರತ ಸಮಯದಲ್ಲಿ ಕಬ್ಬನ್ ಪಾರ್ಕ್, ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಲ್ಲಿ ಕ್ಯೂಆರ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್
ಗಳು, ಪೇಪರ್ ಟಿಕೆಟ್‌ಗಳನ್ನು ಮಾತ್ರ ಅನುಮತಿಸಲಾಗುತ್ತದೆ.