23 July 2024
Pic credit - Twitter
Author : Akshatha Vorkady
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು(ಜುಲೈ 23) ಸತತ 7ನೇ ಬಜೆಟ್ ಮಂಡಿಸುತ್ತಿದ್ದಾರೆ.
Pic credit - Twitter
ಹಾಗಿದ್ದರೆ ಭಾರತದಲ್ಲಿ ಅತೀ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಹಣಕಾಸು ಸಚಿವರುಗಳ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.
Pic credit - Twitter
ಬಜೆಟ್ ಮಂಡಿಸಿದವರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದಾರೆ.
Pic credit - Twitter
ಇವರು ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ ಒಟ್ಟು 10 ಬಜೆಟ್ ಮಂಡಿಸಿದ್ದಾರೆ.
Pic credit - Twitter
ಅತೀ ಹೆಚ್ಚು ಬಾರಿ ಬಜೆಟ್ ಮಂಡನೆ ಮಾಡಿದವರಲ್ಲಿ ಎರಡನೇ ಸ್ಥಾನದಲ್ಲಿ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಅವರು 9 ಬಾರಿ ಮಂಡಿಸಿದ್ದಾರೆ.
Pic credit - Twitter
ಪ್ರಣಬ್ ಮುಖರ್ಜಿ ಅವರು ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ ಎಂಟು ಬಜೆಟ್‌ಗಳನ್ನು ಮಂಡಿಸಿದ್ದರು.
Pic credit - Twitter
ಸ್ವತಂತ್ರ ಭಾರತದ ಮೊಟ್ಟಮೊದಲ ಕೇಂದ್ರ ಬಜೆಟ್ ಅನ್ನು ನವೆಂಬರ್ 26, 1947 ರಂದು ರಾಷ್ಟ್ರದ ಮೊದಲ ಹಣಕಾಸು ಸಚಿವ ಆರ್.ಕೆ.ಷಣ್ಮುಖಂ ಚೆಟ್ಟಿ ಅವರು ಮಂಡಿಸಿದರು.
Pic credit - Twitter