ಟೆಸ್ಟ್‌ಗಳಲ್ಲಿ ಅತಿ ಹೆಚ್ಚು 5 ವಿಕೆಟ್‌ ಕಿತ್ತ 5 ಭಾರತೀಯ ಬೌಲರ್ಸ್

10-March-2024

Author: Vinay Bhat

ರವಿಚಂದ್ರನ್ ಅಶ್ವಿನ್ ಟೆಸ್ಟ್ ಇತಿಹಾಸದಲ್ಲಿ ಅತಿ ಹೆಚ್ಚು ಐದು ವಿಕೆಟ್ ಪಡೆದ ಭಾರತೀಯ ಆಟಗಾರರಾಗಿದ್ದಾರೆ. 36 ಬಾರಿ 5 ವಿಕೆಟ್ ಕಿತ್ತ ಸಾಧನೆ ಮಾಡಿದ್ದಾರೆ.

ರವಿಚಂದ್ರನ್ ಅಶ್ವಿನ್

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಇತಿಹಾಸದಲ್ಲಿ 10 ಬಾರಿ ಐದು ವಿಕೆಟ್ ಪಡೆದ ಇಬ್ಬರು ಬೌಲರ್‌ಗಳಲ್ಲಿ ರವಿಚಂದ್ರನ್ ಅಶ್ವಿನ್ ಕೂಡ ಒಬ್ಬರಾಗಿದ್ದಾರೆ.

ರವಿಚಂದ್ರನ್ ಅಶ್ವಿನ್

ಭಾರತ-ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಈ ಸಾಧನೆ ಮಾಡಿದ್ದಾರೆ. ಭಾರತ ಈ ಸರಣಿಯನ್ನು 4-1 ರಿಂದ ವಶಪಡಿಸಿಕೊಂಡಿದೆ.

ರವಿಚಂದ್ರನ್ ಅಶ್ವಿನ್

ಅನಿಲ್ ಕುಂಬ್ಳೆ ಟೆಸ್ಟ್ ಪಂದ್ಯಗಳಲ್ಲಿ 35 ಬಾರಿ ಐದು ವಿಕೆಟ್ ಕಬಳಿಸಿದ್ದಾರೆ. ಟೆಸ್ಟ್‌ನಲ್ಲಿ 619 ವಿಕೆಟ್‌ಗಳನ್ನು ಕಬಳಿಸಿ ಭಾರತದ ಪರ ಗರಿಷ್ಠ ವಿಕೆಟ್ ಪಡೆದ ಬೌಲರ್ ಆಗಿದ್ದಾರೆ.

ಅನಿಲ್ ಕುಂಬ್ಳೆ

ಹರ್ಭಜನ್ ಸಿಂಗ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 25 ಬಾರಿ ಐದು ವಿಕೆಟ್ ಕಬಳಿಸಿದ್ದಾರೆ. 100 ಟೆಸ್ಟ್ ಪಂದ್ಯಗಳನ್ನು ಆಡಿದ ಎರಡನೇ ಭಾರತೀಯ ಸ್ಪಿನ್ನರ್ ಆಗಿದ್ದಾರೆ.

ಹರ್ಭಜನ್ ಸಿಂಗ್

ಕಪಿಲ್ ದೇವ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 23 ಬಾರಿ ಐದು ವಿಕೆಟ್ ಕಬಳಿಸಿದ್ದಾರೆ. ಒಟ್ಟಾರೆಯಾಗಿ 434 ವಿಕೆಟ್​ಗಳೊಂದಿಗೆ ಭಾರತದ ಅತಿ ಹೆಚ್ಚು ವಿಕೆಟ್ ಪಡೆದ ವೇಗದ ಬೌಲರ್ ಆಗಿದ್ದಾರೆ.

ಕಪಿಲ್ ದೇವ್

ಭಾರತದ ಪ್ರಸಿದ್ಧ ಸ್ಪಿನ್ ಕ್ವಾರ್ಟೆಟ್‌ನ ಭಾಗವಾಗಿರುವ ಬಿಎಸ್ ಚಂದ್ರಶೇಖರ್ ಟೆಸ್ಟ್‌ಗಳಲ್ಲಿ 16 ಬಾರಿ ಐದು ವಿಕೆಟ್‌ಗಳನ್ನು ಕಿತ್ತಿದ್ದಾರೆ.

ಬಿ.ಎಸ್.ಚಂದ್ರಶೇಖರ್