31-10-2023

5ನೇ ಸ್ಥಾನಕ್ಕೆ ಜಿಗಿದ ಅಫ್ಘಾನ್: ಇಲ್ಲಿದೆ ವಿಶ್ವಕಪ್ ಪಾಯಿಂಟ್ಸ್ ಟೇಬಲ್

ಭಾರತ

ಟೀಮ್ ಇಂಡಿಯಾ ಆಡಿರುವ ಆರು ಪಂದ್ಯಗಳ ಪೈಕಿ ಆರರಲ್ಲೂ ಗೆದ್ದು 12 ಅಂಕ ಸಂಪಾದಿಸಿ ಅಗ್ರಸ್ಥಾನದಲ್ಲಿದೆ.

ದಕ್ಷಿಣ ಆಫ್ರಿಕಾ

ದಕ್ಷಿಣ ಆಫ್ರಿಕಾ ತಂಡ ಆಡಿರುವ ಆರು ಪಂದ್ಯಗಳ ಪೈಕಿ ಐದರಲ್ಲಿ ಗೆದ್ದು 10 ಅಂಕ ಸಂಪಾದಿಸಿ ದ್ವಿತೀಯ ಸ್ಥಾನದಲ್ಲಿದೆ.

ನ್ಯೂಝಿಲೆಂಡ್

ನ್ಯೂಝಿಲೆಂಡ್ ಆಡಿರುವ ಆರು ಪಂದ್ಯಗಳ ಪೈಕಿ ನಾಲ್ಕರಲ್ಲಿ ಗೆದ್ದು ಎಂಟು ಅಂಕ ಸಂಪಾದಿಸಿ ರನ್'ರೇಟ್ ಆಧಾರದ ಮೇಲೆ ಮೂರನೇ ಸ್ಥಾನದಲ್ಲಿದೆ.

ಆಸ್ಟ್ರೇಲಿಯಾ

ಆಸ್ಟ್ರೇಲಿಯಾ ತಂಡ ಆಡಿರುವ ಆರು ಪಂದ್ಯಗಳ ಪೈಕಿ ನಾಲ್ಕರಲ್ಲಿ ಗೆದ್ದು, ಎರಡರಲ್ಲಿ ಸೋಲುಂಡು 8 ಅಂಕ ಸಂಪಾದಿಸಿ ನಾಲ್ಕನೇ ಸ್ಥಾನದಲ್ಲಿದೆ.

ಅಫ್ಘಾನಿಸ್ತಾನ

ಅಫ್ಘಾನಿಸ್ತಾನ ತಂಡ ಐದನೇ ಸ್ಥಾನಕ್ಕೆ ಜಿಗಿದಿದ್ದು, 6 ಪಂದ್ಯಗಳ ಪೈಕಿ ತಲಾ ಮೂರು ಗೆಲುವು-ಸೋಲು ಕಂಡು 6 ಅಂಕ ಸಂಪಾದಿಸಿದೆ.

ಶ್ರೀಲಂಕಾ

ಶ್ರೀಲಂಕಾ ತಂಡ ಆಡಿರುವ ಆರು ಪಂದ್ಯಗಳ ಪೈಕಿ ನಾಲ್ಕರಲ್ಲಿ ಸೋತು, ಎರಡರಲ್ಲಿ ಗೆದ್ದು ನಾಲ್ಕು ಅಂಕದೊಂದಿಗೆ 6ನೇ ಸ್ಥಾನದಲ್ಲಿದೆ.

ಪಾಕಿಸ್ತಾನ

ಪಾಕಿಸ್ತಾನ ತಂಡ ಆಡಿರುವ ಆರು ಪಂದ್ಯಗಳ ಪೈಕಿ ಕೇವಲ ಎರಡರಲ್ಲಿ ಗೆದ್ದು, ನಾಲ್ಕರಲ್ಲಿ ಸೋಲು ಕಂಡು 4 ಅಂಕ ಸಂಪಾದಿಸಿ 7ನೇ ಸ್ಥಾನದಲ್ಲಿದೆ.

ನೆದರ್ಲೆಂಡ್ಸ್

ನೆದರ್ಲೆಂಡ್ಸ್ ತಂಡ ಆಡಿರುವ ಆರು ಪಂದ್ಯಗಳ ಪೈಕಿ ಎರಡರಲ್ಲಿ ಗೆದ್ದು ನಾಲ್ಕು ಅಂಕ ಸಂಪಾದಿಸಿ ಎಂಟನೇ ಸ್ಥಾನದಲ್ಲಿದೆ.

ಬಾಂಗ್ಲಾದೇಶ

ಬಾಂಗ್ಲಾದೇಶ ತಂಡ ಆಡಿರುವ 6 ಪಂದ್ಯಗಳ ಪೈಕಿ ಐದರಲ್ಲಿ ಸೋಲು, ಒಂದರಲ್ಲಿ ಗೆದ್ದು ಎರಡು ಅಂಕ ಸಂಪಾದಿಸಿ 9ನೇ ಸ್ಥಾನದಲ್ಲಿದೆ.

ಇಂಗ್ಲೆಂಡ್

ಇಂಗ್ಲೆಂಡ್ ತಂಡ ಆಡಿರುವ 6 ಪಂದ್ಯಗಳ ಪೈಕಿ ಕೇವಲ ಒಂದರಲ್ಲಿ ಗೆಲುವು, ಐದರಲ್ಲಿ ಸೋಲುಂಡು 2 ಅಂಕ ಸಂಪಾದಿಸಿ 10ನೇ ಸ್ಥಾನದಲ್ಲಿದೆ.

ಒಂದಲ್ಲ ಎರಡಲ್ಲ: ರೋಹಿತ್ ಶರ್ಮಾ ನಿರ್ಮಿಸಿದ್ದು 10 ದಾಖಲೆ