ಆಫ್ರಿಕಾ ನೆಲದಲ್ಲಿ ಟೆಸ್ಟ್ ಪಂದ್ಯ ಗೆದ್ದ ಟೀಂ ಇಂಡಿಯಾ ನಾಯಕರಿವರು
Author: ಪೃಥ್ವಿ ಶಂಕರ
2006 ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಭಾರತ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಗೆದ್ದಿತು. ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಪಂದ್ಯವನ್ನು ಭಾರತ 123 ರನ್‌ಗಳಿಂದ ಗೆದ್ದುಕೊಂಡಿತ್ತು.
2010ರಲ್ಲಿ ಎರಡನೇ ಗೆಲುವು ಸಾಧಿಸಿದ್ದ ಭಾರತ, ಎಂಎಸ್ ಧೋನಿ ನಾಯಕತ್ವದಲ್ಲಿ ಡರ್ಬನ್ ಟೆಸ್ಟ್ ಪಂದ್ಯವನ್ನು 87 ರನ್‌ಗಳಿಂದ ಗೆದ್ದಿತ್ತು.
2018 ರಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಪಂದ್ಯವನ್ನು 63 ರನ್‌ಗಳಿಂದ ಗೆದ್ದಿದ್ದ ಟೀಂ ಇಂಡಿಯಾವನ್ನು ವಿರಾಟ್ ಕೊಹ್ಲಿ ಮುನ್ನಡೆಸಿದ್ದರು.
ಇದಾದ ಬಳಿಕ 2021ರಲ್ಲಿ ಸೆಂಚುರಿಯನ್‌ನಲ್ಲಿ ನಡೆದ ಪಂದ್ಯವನ್ನು ಭಾರತ 113 ರನ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿತು. ಆ ಪಂದ್ಯದಲ್ಲೂ ಕೊಹ್ಲಿ ನಾಯಕರಾಗಿದ್ದರು.
ದಕ್ಷಿಣ ಆಫ್ರಿಕಾದಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಗೆದ್ದ ಭಾರತ ತಂಡದ ಏಕೈಕ ನಾಯಕನೆಂದರೆ ಅದು ವಿರಾಟ್ ಕೊಹ್ಲಿ.
ರೋಹಿತ್ ಶರ್ಮಾ ನಾಯಕತ್ವದಲ್ಲಿ ಐದನೇ ಪಂದ್ಯವನ್ನು ಗೆದ್ದಿರುವ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ.
ಎಂಎಸ್ ಧೋನಿ ನಂತರ, ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿಯನ್ನು ಡ್ರಾದಲ್ಲಿ ಅಂತ್ಯಗೊಳಿಸಲು ಯಶಸ್ವಿಯಾದ ಏಕೈಕ ಭಾರತೀಯ ನಾಯಕ ರೋಹಿತ್ ಶರ್ಮಾ. 2010ರಲ್ಲಿ ಧೋನಿ ಸರಣಿಯನ್ನು ಟೈ ನಲ್ಲಿ ಅಂತ್ಯಗೊಳಿಸಿದ್ದರು.