22-02-2024

ಒಂದೇ ಓವರ್​ನಲ್ಲಿ 6 ಸಿಕ್ಸರ್ ಸಿಡಿಸಿದ ಭಾರತದ ಬ್ಯಾಟರ್ಸ್ ಯಾರು ಗೊತ್ತೇ?

Author: Vinay Bhat

ರವಿಶಾಸ್ತ್ರಿ

ರವಿಶಾಸ್ತ್ರಿ ಒಂದು ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಸಿಡಿಸಿದ ಮೊದಲ ಭಾರತೀಯ ಬ್ಯಾಟರ್. ಮುಂಬೈ ಪರ ರಣಜಿ ಟ್ರೋಫಿ 1985-86 ರ ಬರೋಡಾ ವಿರುದ್ಧದ ಪಂದ್ಯದಲ್ಲಿ ಈ ಸಾಧನೆ ಮಾಡಿದರು.

ಯುವರಾಜ್ ಸಿಂಗ್

2007ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಯುವರಾಜ್ ಸಿಂಗ್ ಒಂದು ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಸಿಡಿಸಿದ್ದರು. ಸ್ಟುವರ್ಟ್ ಬ್ರಾಡ್ ಬೌಲಿಂಗ್ ಮಾಡಿದ್ದರು.

ಯುವರಾಜ್ ಸಿಂಗ್

ಯುವರಾಜ್ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಂದು ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಸಿಡಿಸಿದ ಏಕೈಕ ಭಾರತೀಯ ಕ್ರಿಕೆಟಿಗನಾಗಿದ್ದಾರೆ.

ಯುವರಾಜ್ ಸಿಂಗ್

ಯುವರಾಜ್ ಸಿಂಗ್ ಅವರು ಕೇವಲ 12 ಎಸೆತಗಳಲ್ಲಿ ತಮ್ಮ ಅರ್ಧಶತಕವನ್ನು ತಲುಪಿದ್ದು ಟಿ20 ಕ್ರಿಕೆಟ್‌ನಲ್ಲಿ ಅತಿ ವೇಗದ ಅರ್ಧಶತಕ ಕೂಡ ಆಗಿದೆ.

ರುತುರಾಜ್ ಗಾಯಕ್ವಾಡ್

ಮಹಾರಾಷ್ಟ್ರದ ಗಾಯಕ್ವಾಡ್ 2022 ರಲ್ಲಿ ಉ. ಪ್ರದೇಶ ವಿರುದ್ಧದ ವಿಜಯ್ ಹಜಾರೆ ಟ್ರೋಫಿಯಲ್ಲಿ ಒಂದು ಓವರ್‌ನಲ್ಲಿ 7 ಸಿಕ್ಸರ್‌ಗಳನ್ನು ಸಿಡಿಸಿದ್ದರು. ಇದರಲ್ಲಿ ಒಂದು ನೋ ಬಾಲ್ ಕೂಡ ಆಗಿತ್ತು.

ರುತುರಾಜ್ ಗಾಯಕ್ವಾಡ್

ಗಾಯಕ್ವಾಡ್ ಅವರು ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಓವರ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ (42 ರನ್) ಎಲ್ಟನ್ ಚಿಗುಂಬರ ಅವರ (39) ದಾಖಲೆಯನ್ನು ಕೂಡ ಮುರಿದರು.

ವಂಶಿ ಕೃಷ್ಣ

ಆಂಧ್ರಪ್ರದೇಶದ ವಿಕೆಟ್‌ಕೀಪರ್-ಬ್ಯಾಟರ್ 2024 ರಲ್ಲಿ ಸಿಕೆ ನಾಯ್ಡು ಟ್ರೋಫಿ ಪಂದ್ಯದ ದಮನ್‌ದೀಪ್ ಓವರ್‌ನಲ್ಲಿ 6 ಎಸೆತಗಳಲ್ಲಿ ಆರು ಸಿಕ್ಸರ್‌ಗಳನ್ನು ಸಿಡಿಸಿದರು.