11-01-2024

ಟೆಸ್ಟ್‌ನಲ್ಲಿ ರಾಹುಲ್ ದ್ರಾವಿಡ್ ಸೃಷ್ಟಿಸಿರುವ ಈ ದಾಖಲೆಯನ್ನು ಯಾರಿಂದಲೂ ಮುರಿಯಲು ಸಾಧ್ಯವಿಲ್ಲ..!

Author: ಪೃಥ್ವಿ ಶಂಕರ

ಟೆಸ್ಟ್‌ನಲ್ಲಿ ಅತೀ ಹೆಚ್ಚು ಸಮಯ ಬ್ಯಾಟಿಂಗ್ ಮಾಡಿದ ಆಟಗಾರರ ಪಟ್ಟಿಯಲ್ಲಿ ರಾಹುಲ್ ದ್ರಾವಿಡ್ ಅಗ್ರಸ್ಥಾನದಲ್ಲಿದ್ದಾರೆ.

ರಾಹುಲ್ ದ್ರಾವಿಡ್ ತಮ್ಮ ಟೆಸ್ಟ್ ಕ್ರಿಕೆಟ್‌ನಲ್ಲಿ ಒಟ್ಟು 736 ಗಂಟೆಗಳ ಬ್ಯಾಟಿಂಗ್ ಮಾಡಿದ್ದಾರೆ.

ಎರಡನೇ ಸ್ಥಾನದಲ್ಲಿರುವ ಸಚಿನ್ ತೆಂಡೂಲ್ಕರ್ ತಮ್ಮ ಟೆಸ್ಟ್ ಕ್ರಿಕೆಟ್‌ನಲ್ಲಿ 688 ಗಂಟೆಗಳ ಕಾಲ ಬ್ಯಾಟಿಂಗ್ ಮಾಡಿದ್ದಾರೆ.

ದಕ್ಷಿಣ ಆಫ್ರಿಕಾದ ಆಲ್​ರೌಂಡರ್ ಜಾಕ್ವೆಸ್ ಕಾಲಿಸ್ ತಮ್ಮ ಟೆಸ್ಟ್ ಕ್ರಿಕೆಟ್‌ನಲ್ಲಿ 640 ಗಂಟೆಗಳ ಕಾಲ ಬ್ಯಾಟಿಂಗ್ ಮಾಡಿದ್ದಾರೆ.

ವೆಸ್ಟ್ ಇಂಡೀಸ್​ನ ಮಾಜಿ ಆಟಗಾರ ಶಿವನಾರಾಯಣ್ ಚಂದ್ರಪಾಲ್ ತಮ್ಮ ಟೆಸ್ಟ್ ಕ್ರಿಕೆಟ್‌ನಲ್ಲಿ 629 ಗಂಟೆಗಳ ಕಾಲ ಬ್ಯಾಟಿಂಗ್ ಮಾಡಿದ್ದಾರೆ.

ಇಂಗ್ಲೆಂಡ್ ತಂಡದ ಮಾಜಿ ನಾಯಕ ಅಲಸ್ಟೈರ್ ಕುಕ್ ತಮ್ಮ ಟೆಸ್ಟ್ ಕ್ರಿಕೆಟ್‌ನಲ್ಲಿ 622 ಗಂಟೆಗಳ ಕಾಲ ಬ್ಯಾಟಿಂಗ್ ಮಾಡಿದ್ದಾರೆ.

ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಅಲನ್ ಬಾರ್ಡರ್ ತಮ್ಮ ಟೆಸ್ಟ್ ಕ್ರಿಕೆಟ್‌ನಲ್ಲಿ 594 ಗಂಟೆಗಳ ಕಾಲ ಬ್ಯಾಟಿಂಗ್ ಮಾಡಿದ್ದಾರೆ

ಶ್ರೀಲಂಕಾ ತಂಡದ ಮಾಜಿ ನಾಯಕ ಕುಮಾರ ಸಂಗಕ್ಕಾರ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 540 ಗಂಟೆಗಳ ಕಾಲ ಬ್ಯಾಟಿಂಗ್ ಮಾಡಿದ್ದಾರೆ.

ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ರಿಕಿ ಪಾಂಟಿಂಗ್ ತಮ್ಮ ಟೆಸ್ಟ್ ಕ್ರಿಕೆಟ್‌ನಲ್ಲಿ 536 ಗಂಟೆಗಳ ಕಾಲ ಬ್ಯಾಟಿಂಗ್ ಮಾಡಿದ್ದಾರೆ.