08-01-2024

IND vs AFG: ಭಾರತ- ಅಫ್ಘಾನ್ ಟಿ20 ಸರಣಿಯ ಪೂರ್ಣ ವಿವರ ಇಲ್ಲಿದೆ.

Author: ಪೃಥ್ವಿ ಶಂಕರ

ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ಇದೇ ಜನವರಿ 11 ರಿಂದ 3 ಪಂದ್ಯಗಳ ಟಿ20 ಸರಣಿ ನಡೆಯಲ್ಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಗುರುವಾರ (ಜನವರಿ 11) ಮೊಹಾಲಿಯ ಪಂಜಾಬ್ ಕ್ರಿಕೆಟ್ ಸಂಸ್ಥೆ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಎರಡನೇ ಟಿ20 ಪಂದ್ಯ ಇಂದೋರ್‌ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಸರಣಿಯ ಕೊನೆಯ ಪಂದ್ಯದಲ್ಲಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿವೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎಲ್ಲಾ ಮೂರು ಟಿ20 ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7:00 ರಿಂದ ನಡೆಯಲಿವೆ.

ಈ ಪಂದ್ಯಗಳ ನೇರ ಪ್ರಸಾರ ಸ್ಪೋರ್ಟ್ಸ್ 18 ನೆಟ್‌ವರ್ಕ್‌ನಲ್ಲಿ ಇರಲಿದೆ. ಹಾಗೆಯೇ ಜಿಯೋ ಸಿನಿಮಾದಲ್ಲಿ ಟಿ20 ಸರಣಿಯ ಲೈವ್ ಸ್ಟ್ರೀಮಿಂಗ್ ಅನ್ನು ಅಭಿಮಾನಿಗಳು ಉಚಿತವಾಗಿ ವೀಕ್ಷಿಸಬಹುದಾಗಿದೆ.

ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ಆಡುತ್ತಿರುವ ಕೊನೆಯ ಟಿ20 ಸರಣಿ ಇದಾಗಿದೆ. ಹೀಗಾಗಿ ಟಿ20 ವಿಶ್ವಕಪ್ ತಯಾರಿಯ ದೃಷ್ಟಿಯಿಂದ ಈ ಸರಣಿ ಎರಡೂ ತಂಡಗಳಿಗೂ ಬಹಳ ಮುಖ್ಯವಾಗಿದೆ.