25-01-2024

ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಭಾರತೀಯ ಬೌಲರ್ಸ್

Author: Vinay Bhat

ಬಿಎಸ್ ಚಂದ್ರಶೇಖರ್

ಲೆಜೆಂಡರಿ ಲೆಗ್ ಸ್ಪಿನ್ನರ್ ಬಿಎಸ್ ಚಂದ್ರಶೇಖರ್ ಇಂಗ್ಲೆಂಡ್ ವಿರುದ್ಧ 95 ವಿಕೆಟ್ ಕೀಳುವ ಮೂಲಕ ಭಾರತದ ಪ್ರಮುಖ ಟೆಸ್ಟ್ ವಿಕೆಟ್ ಟೇಕರ್ ಆಗಿದ್ದಾರೆ.

ಅನಿಲ್ ಕುಂಬ್ಳೆ

ಭಾರತದ ಶ್ರೇಷ್ಠ ಸ್ಪಿನ್ನರ್, ಕರ್ನಾಟಕದ ಅನಿಲ್ ಕುಂಬ್ಳೆ ತಮ್ಮ ವೃತ್ತಿಜೀವನದಲ್ಲಿ ಇಂಗ್ಲೆಂಡ್ ವಿರುದ್ಧ 92 ಟೆಸ್ಟ್ ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ರವಿಚಂದ್ರನ್ ಅಶ್ವಿನ್

ರವಿಚಂದ್ರನ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ 88 ವಿಕೆಟ್ ಕಿತ್ತಿದ್ದಾರೆ.

ಬಿಶನ್ ಸಿಂಗ್ ಬೇಡಿ

ಮತ್ತೋರ್ವ ದಿಗ್ಗಜ ಬಿಶನ್ ಸಿಂಗ್ ಬೇಡಿ ಇಂಗ್ಲೆಂಡ್ ವಿರುದ್ಧ 85 ಟೆಸ್ಟ್ ವಿಕೆಟ್ ಕಬಳಿಸಿದ್ದಾರೆ.

ಕಪಿಲ್ ದೇವ್

ಕಪಿಲ್ ದೇವ್ ಇಂಗ್ಲೆಂಡ್ ವಿರುದ್ಧ 27 ಟೆಸ್ಟ್ ಪಂದ್ಯಗಳಿಂದ 85 ವಿಕೆಟ್ ಪಡೆದಿದ್ದಾರೆ.

ಇಶಾಂತ್ ಶರ್ಮಾ

ಟೀಮ್ ಇಂಡಿಯಾ ವೇಗಿ ಇಶಾಂತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ ಭಾರತದ ಪರ 67 ವಿಕೆಟ್ ಕಬಳಿಸಿದ್ದಾರೆ.

ವಿನೂ ಮಂಕಡ್

ಲೆಜೆಂಡರಿ ಆಲ್ ರೌಂಡರ್ ವಿನೂ ಮಂಕಡ್ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯಗಳಲ್ಲಿ 54 ವಿಕೆಟ್ ಕಬಳಿಸಿದ್ದಾರೆ.

ರವೀಂದ್ರ ಜಡೇಜಾ

ರವೀಂದ್ರ ಜಡೇಜಾ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯಗಳಲ್ಲಿ 51 ಟೆಸ್ಟ್ ವಿಕೆಟ್ ಪಡೆದಿದ್ದಾರೆ.

ಹರ್ಭಜನ್ ಸಿಂಗ್

ಭಾರತದ ಲೆಜೆಂಡರಿ ಸ್ಪಿನ್ನರ್ ಹರ್ಭಜನ್ ಸಿಂಗ್ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯಗಳಲ್ಲಿ 45 ವಿಕೆಟ್ ಪಡೆದಿದ್ದಾರೆ.