ಇಂಗ್ಲೆಂಡ್ ವಿರುದ್ಧದ ಟೆಸ್ಟ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ಸ್

24-February-2024

Author: Vinay Bhat

ಸದ್ಯ ಸಾಗುತ್ತಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ 100 ಟೆಸ್ಟ್ ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ.

ರವಿಚಂದ್ರನ್ ಅಶ್ವಿನ್

ರವಿಚಂದ್ರನ್ ಅಶ್ವಿನ್ ಇಂಗ್ಲೆಂಡ್ ವಿರುದ್ಧ ಟೆಸ್ಟ್​ನಲ್ಲಿ 100 ವಿಕೆಟ್ ಪಡೆದ ಮೊದಲ ಭಾರತೀಯ ಬೌಲರ್ ಆಗಿ ಇತಿಹಾಸ ನಿರ್ಮಿಸಿದ್ದಾರೆ.

ರವಿಚಂದ್ರನ್ ಅಶ್ವಿನ್

ಇಂಗ್ಲೆಂಡ್ ವಿರುದ್ಧದ 23 ಟೆಸ್ಟ್ ಪಂದ್ಯಗಳಲ್ಲಿ ಭಾರತದ ಮಾಜಿ ಸ್ಪಿನ್ನರ್ ಬಿಎಸ್ ಚಂದ್ರಶೇಖರ್ 95 ವಿಕೆಟ್ ಕಬಳಿಸಿ ಎರಡನೇ ಸ್ಥಾನದಲ್ಲಿದ್ದಾರೆ.

ಬಿಎಸ್ ಚಂದ್ರಶೇಖರ್

ಟೀಮ್ ಇಂಡಿಯಾ ದಿಗ್ಗಜ ಸ್ಪಿನ್ನರ್ ಅನಿಲ್ ಕುಂಬ್ಳೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಕ್ರಿಕೆಟ್‌ನಲ್ಲಿ 92 ವಿಕೆಟ್‌ಗಳನ್ನು ಕಿತ್ತಿದ್ದಾರೆ.

ಅನಿಲ್ ಕುಂಬ್ಳೆ

ಅನಿಲ್ ಕುಂಬ್ಳೆ ಒಟ್ಟು 619 ವಿಕೆಟ್‌ಗಳೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಕೂಡ ಆಗಿದ್ದಾರೆ.

ಅನಿಲ್ ಕುಂಬ್ಳೆ

ಬಿಶನ್ ಸಿಂಗ್ ಬೇಡಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ನಲ್ಲಿ ಭಾರತದ ಪರ 85 ವಿಕೆಟ್ ಪಡೆದಿದ್ದಾರೆ. ಅಲ್ಲದೆ ನಾಲ್ಕು ಬಾರಿ ಐದು ವಿಕೆಟ್‌ಗಳನ್ನು ಪಡೆದಿದ್ದಾರೆ.

ಬಿಶನ್ ಸಿಂಗ್ ಬೇಡಿ

ಭಾರತದ ಶ್ರೇಷ್ಠ ಕ್ರಿಕೆಟಿಗ ಕಪಿಲ್ ದೇವ್ ಭಾರತ ಪರ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ 85 ವಿಕೆಟ್ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ವೇಗಿ ಕೂಡ ಹೌದು.

ಕಪಿಲ್ ದೇವ್