10-06-2024

ಟಿ20 ಯಲ್ಲಿ ಪಾಕ್ ವಿರುದ್ಧ ವಿಶಿಷ್ಟ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ

Author: ಪೃಥ್ವಿ ಶಂಕರ

ಪಾಕಿಸ್ತಾನ ತಂಡದ ವಿರುದ್ಧ ಟಿ20ಯಲ್ಲಿ 13 ವಿಕೆಟ್‌ಗಳನ್ನು ಕಬಳಿಸಿರುವ ಹಾರ್ದಿಕ್ ಪಾಂಡ್ಯ, ಈ ತಂಡದ ವಿರುದ್ಧ ಟಿ20 ಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆಬರೆದಿದ್ದಾರೆ.

ಎರಡನೇ ಸ್ಥಾನದಲ್ಲಿರುವ ಭುವನೇಶ್ವರ್ ಕುಮಾರ್ ಪಾಕಿಸ್ತಾನ ತಂಡದ ವಿರುದ್ಧ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 11 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಅರ್ಷದೀಪ್ ಸಿಂಗ್ ಪಾಕಿಸ್ತಾನ ತಂಡದ ವಿರುದ್ಧ ಟಿ20 ಕ್ರಿಕೆಟ್‌ನಲ್ಲಿ ಇದುವರೆಗೆ 7 ವಿಕೆಟ್ ಪಡೆದಿದ್ದಾರೆ.

ಇರ್ಫಾನ್ ಪಠಾಣ್ ಪಾಕಿಸ್ತಾನ ತಂಡದ ವಿರುದ್ಧ ಟಿ20 ಕ್ರಿಕೆಟ್‌ನಲ್ಲಿ 6 ವಿಕೆಟ್ ಪಡೆದಿದ್ದರು.

ಜಸ್ಪ್ರೀತ್ ಬುಮ್ರಾ ಪಾಕಿಸ್ತಾನ ತಂಡದ ವಿರುದ್ಧ ಟಿ20 ಕ್ರಿಕೆಟ್‌ನಲ್ಲಿ ಇದುವರೆಗೆ 5 ವಿಕೆಟ್ ಉರುಳಿಸಿದ್ದಾರೆ.

ಪಾಕಿಸ್ತಾನ ತಂಡದ ವಿರುದ್ಧ ಟಿ20 ಕ್ರಿಕೆಟ್‌ನಲ್ಲಿ ಆರ್‌ಪಿ ಸಿಂಗ್ 4 ವಿಕೆಟ್ ಕಬಳಿಸಿದ್ದಾರೆ.

ಯುವರಾಜ್ ಸಿಂಗ್ ಪಾಕಿಸ್ತಾನ ತಂಡದ ವಿರುದ್ಧ ಟಿ20 ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ 4 ವಿಕೆಟ್ ಕಬಳಿಸಿದ್ದಾರೆ.

ರವೀಂದ್ರ ಜಡೇಜಾ ಕೂಡ ಪಾಕಿಸ್ತಾನ ತಂಡದ ವಿರುದ್ಧ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4 ವಿಕೆಟ್ ಉರುಳಿಸಿದ್ದಾರೆ.