IND vs SA: ಟಿ20ಯಲ್ಲಿ ಆಫ್ರಿಕಾ ವಿರುದ್ಧ ಭಾರತದ ಪ್ರದರ್ಶನ ಹೇಗಿದೆ?

08-12-2023

IND vs SA: ಟಿ20ಯಲ್ಲಿ ಆಫ್ರಿಕಾ ವಿರುದ್ಧ ಭಾರತದ ಪ್ರದರ್ಶನ ಹೇಗಿದೆ?

Author: ಪೃಥ್ವಿ ಶಂಕರ

TV9 Kannada Logo For Webstory First Slide
ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ವಿರುದ್ಧ ಟಿ20, ಏಕದಿನ ಮತ್ತು ಟೆಸ್ಟ್ ಎಲ್ಲಾ ಮೂರು ಮಾದರಿಗಳ ಸರಣಿಯನ್ನು ಆಡಲಿದೆ.

ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ವಿರುದ್ಧ ಟಿ20, ಏಕದಿನ ಮತ್ತು ಟೆಸ್ಟ್ ಎಲ್ಲಾ ಮೂರು ಮಾದರಿಗಳ ಸರಣಿಯನ್ನು ಆಡಲಿದೆ.

ಮೊದಲನೆಯದಾಗಿ, ಮೂರು ಪಂದ್ಯಗಳ ಟಿ20 ಸರಣಿಯು ಡಿಸೆಂಬರ್ 10 ರಿಂದ ಪ್ರಾರಂಭವಾಗಲಿದೆ.

ಮೊದಲನೆಯದಾಗಿ, ಮೂರು ಪಂದ್ಯಗಳ ಟಿ20 ಸರಣಿಯು ಡಿಸೆಂಬರ್ 10 ರಿಂದ ಪ್ರಾರಂಭವಾಗಲಿದೆ.

ಟಿ20ಯಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾದ ಅಂಕಿಅಂಶ ಹೇಗಿದೆ? ಯಾವ ತಂಡವು ಮೇಲುಗೈ ಹೊಂದಿದೆ ಎಂಬುದನ್ನು ನೋಡುವುದಾದರೆ..

ಟಿ20ಯಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾದ ಅಂಕಿಅಂಶ ಹೇಗಿದೆ? ಯಾವ ತಂಡವು ಮೇಲುಗೈ ಹೊಂದಿದೆ ಎಂಬುದನ್ನು ನೋಡುವುದಾದರೆ..

ಟೀಂ ಇಂಡಿಯಾ ತನ್ನ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಇದೇ ದಕ್ಷಿಣ ಆಫ್ರಿಕಾ ತಂಡದ ಎದುರು ಆಡಿತ್ತು.

ಆ ಮೊದಲ ಪಂದ್ಯದಲ್ಲಿ ವೀರೇಂದ್ರ ಸೆಹ್ವಾಗ್ ನಾಯಕರಾಗಿದ್ದು, ಈ ಪಂದ್ಯದಲ್ಲಿ ಭಾರತ ತಂಡ ಗೆಲುವು ಸಾಧಿಸಿತ್ತು.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಒಟ್ಟು 24 ಟಿ20 ಪಂದ್ಯಗಳನ್ನು ಆಡಲಾಗಿದೆ, ಅದರಲ್ಲಿ ಭಾರತ 13 ಪಂದ್ಯಗಳನ್ನು ಗೆದ್ದಿದ್ದರೆ, ದಕ್ಷಿಣ ಆಫ್ರಿಕಾ 10 ಪಂದ್ಯಗಳನ್ನು ಗೆದ್ದಿದೆ.

ಈ ಅಂಕಿ ಅಂಶಗಳನ್ನು ನೋಡಿದರೆ ಟೀಂ ಇಂಡಿಯಾ ಮೇಲುಗೈ ಸಾಧಿಸಿದ್ದರೂ ದಕ್ಷಿಣ ಆಫ್ರಿಕಾ ತಂಡ ಕೂಡ ಹಿಂದೆ ಬಿದ್ದಿಲ್ಲ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆದ ಕಳೆದ ಮೂರು ಟಿ20 ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಎರಡು ಪಂದ್ಯಗಳನ್ನು ಗೆದ್ದಿದ್ದರೆ, ಭಾರತ ತಂಡ ಒಂದು ಪಂದ್ಯವನ್ನು ಗೆದ್ದಿದೆ.