ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮುಖ್ಯ ಕೋಚ್ ಗೌತಮ್ ಗಂಭೀರ್ ಅಧಿಕಾರವದಿಯಲ್ಲಿ ಮೊದಲ ಬಾರಿಗೆ ಟಿ20 ಮತ್ತು ಏಕದಿನ ತಂಡಗಳನ್ನು ಆಯ್ಕೆ ಮಾಡಲಾಗಿದೆ.
Pic credit: Google
ಟಿ20 ತಂಡಕ್ಕೆ ಸೂರ್ಯಕುಮಾರ್ ಯಾದವ್ ನಾಯಕರಾಗಿದ್ದರೆ, ಇತ್ತ ಟಿ20 ವಿಶ್ವಕಪ್‌ನಲ್ಲಿ ಉಪನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ತಮ್ಮ ಉಪನಾಯಕತ್ವವನ್ನೂ ಕಳೆದುಕೊಂಡಿದ್ದಾರೆ.
Pic credit: Google
ಹಾರ್ದಿಕ್ ಪಾಂಡ್ಯ ಈಗ ಟಿ20 ತಂಡದಲ್ಲಿ ಆಲ್ ರೌಂಡರ್ ಆಗಿ ಮಾತ್ರ ಆಡಲಿದ್ದಾರೆ. ಅವರ ಸ್ಥಾನಕ್ಕೆ ಶುಭ್‌ಮನ್ ಗಿಲ್ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ.
Pic credit: Google
ಈ ಹಿಂದೆ ರೋಹಿತ್ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ಟಿ20 ತಂಡದ ನಾಯಕರಾಗಿದ್ದರು. ಅಲ್ಲದೆ ನಾಯಕರಾಗಿ ಅವರ ಪ್ರದರ್ಶನ ಉತ್ತಮವಾಗಿತ್ತು ಆದರೆ ಇದರ ಹೊರತಾಗಿಯೂ ಅವರಿಗೆ ಪೂರ್ಣ ಸಮಯದ ನಾಯಕತ್ವದ ಅವಕಾಶವನ್ನು ನೀಡಲಾಗಿಲ್ಲ.
Pic credit: Google
ಹಾರ್ದಿಕ್ ಪಾಂಡ್ಯಗೆ ನಾಯಕತ್ವ ಸಿಗದಿರಲು ಅವರ ಫಿಟ್ನೆಸ್ ಕಾರಣ ಎಂದು ಹೇಳಲಾಗುತ್ತಿದೆ. ಹೀಗಾಗಿ ಅವರನ್ನು ನಾಯಕ ಅಥವಾ ಉಪನಾಯಕನಾಗಿ ಆಯ್ಕೆ ಮಾಡಲಾಗಿಲ್ಲ ಎಂದು ವರದಿಯಾಗಿದೆ.
Pic credit: Google
ಇತ್ತ ಗಿಲ್ರನ್ನು ಯಾವ ಮಾನದಂಡದ ಆಧಾರದ ಮೇಲೆ ಉಪನಾಯಕನಾಗಿ ನೇಮಿಸಲಾಗಿದೆ ಎಂಬುದು ಹಲವರ ಪ್ರಶ್ನೆಯಾಗಿದೆ.
Pic credit: Google
ಆಟಗಾರನಾಗಿ ಅವರ ಟಿ20 ದಾಖಲೆ ಈಗಾಗಲೇ ಕೆಟ್ಟದಾಗಿದೆ. ಅವರ ಸ್ಟ್ರೈಕ್ ರೇಟ್ ಬಗ್ಗೆಯೂ ಪ್ರಶ್ನಾರ್ಥಕ ಚಿಹ್ನೆಗಳು ಎದ್ದಿವೆ. ಇದೆಲ್ಲದರ ಹೊರತಾಗಿಯೂ ಅವರನ್ನು ಉಪನಾಯಕನಾಗಿ ನೇಮಿಸಲಾಗಿದೆ.