14-12-2023

ಜೋಹಾನ್ಸ್‌ಬರ್ಗ್‌ ಪಿಚ್'ನಲ್ಲಿ ನಡೆಯುತ್ತಾ ಬ್ಯಾಟರ್'ಗಳ ಆಟ?

Author: Vinay Bhat

ಭಾರತ-ದಕ್ಷಿಣ ಆಫ್ರಿಕಾ

ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೂರು ಟಿ20 ಪಂದ್ಯಗಳ ಸರಣಿಯ ಮೂರನೇ ಮತ್ತು ನಿರ್ಣಾಯಕ ಪಂದ್ಯ ಇಂದು ನಡೆಯಲಿದೆ.

ಪಂದ್ಯ ಎಲ್ಲಿ?

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಮೂರನೇ ಟಿ20 ಪಂದ್ಯ ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಪಿಚ್ ಹೇಗಿದೆ?

ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದ ಪಿಚ್‌ ಬ್ಯಾಟಿಂಗ್‌ಗೆ ಅನುಕೂಲಕರವೆಂದು ಪರಿಗಣಿಸಲಾಗಿದೆ. ನಿರಂತರ ಮಳೆಯಿಂದಾಗಿ, ಪಿಚ್‌ನಲ್ಲಿನ ತೇವಾಂಶವು ಬೌಲರ್‌ಗಳಿಗೆ ಸಹಾಯ ಮಾಡುತ್ತದೆ.

ಹೈ-ಸ್ಕೋರ್

ಟಿ20 ಸ್ವರೂಪದಲ್ಲಿ ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದ ಪಿಚ್‌ನಲ್ಲಿ ದೊಡ್ಡ ಸ್ಕೋರ್‌ಗಳನ್ನು ಮಾಡಬಹುದು. ಇಲ್ಲಿ ಶ್ರೀಲಂಕಾ ತಂಡ ಕೀನ್ಯಾ ವಿರುದ್ಧ 260 ರನ್ ಗಳಿಸಿತ್ತು.

ಸರಾಸರಿ ಸ್ಕೋರ್

ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದಲ್ಲಿ ಮೊದಲ ಇನ್ನಿಂಗ್ಸ್‌ ಸರಾಸರಿ ಸ್ಕೋರ್ 171 ಆಗಿದ್ದರೆ, ಎರಡನೇ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 145 ಆಗಿದೆ.

ಹವಾಮಾನ

ವೆದರ್‌ಕಾಮ್ ಪ್ರಕಾರ, ಜೋಹಾನ್ಸ್‌ಬರ್ಗ್‌ನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಲುಪುತ್ತದೆ. ಮಳೆಯ ಸಾಧ್ಯತೆ ಕಡಿಮೆ.

ಗೆಲ್ಲಲೇ ಬೇಕು

ಮೊದಲ ಪಂದ್ಯ ಮಳೆಯಿಂದ ರದ್ದಾಯಿತು, ಎರಡನೇ ಟಿ20ಯಲ್ಲಿ ಆಫ್ರಿಕಾ ಭಾರತವನ್ನು 5 ವಿಕೆಟ್‌ಗಳಿಂದ ಸೋಲಿಸಿತು. ಹೀಗಾಗಿ 3ನೇ ಟಿ20ಯಲ್ಲಿ ಭಾರತ ಗೆದ್ದರಷ್ಟೆ ಸರಣಿ ಸೋಲು ತಪ್ಪಿಸಬಹುದು.