ವೈವಾಹಿಕ ಜೀವನಕ್ಕೆ ಕಾಲಿರಿಸಿದ ಆರ್​ಸಿಬಿ ಮಾಜಿ ವೇಗದ ಬೌಲರ್

ವೈವಾಹಿಕ ಜೀವನಕ್ಕೆ ಕಾಲಿರಿಸಿದ ಆರ್​ಸಿಬಿ ಮಾಜಿ ವೇಗದ ಬೌಲರ್

24 November 2023

ಭಾರತ ತಂಡದ ಹಲವು ಆಟಗಾರರು 2023ರಲ್ಲಿ ವಿವಾಹವಾಗಿದ್ದು, ಇದೀಗ ವೇಗದ ಬೌಲರ್ ನವದೀಪ್ ಸೈನಿ ಅವರ ಹೆಸರೂ ಸೇರ್ಪಡೆಯಾಗಿದೆ.

ಭಾರತ ತಂಡದ ಹಲವು ಆಟಗಾರರು 2023ರಲ್ಲಿ ವಿವಾಹವಾಗಿದ್ದು, ಇದೀಗ ವೇಗದ ಬೌಲರ್ ನವದೀಪ್ ಸೈನಿ ಅವರ ಹೆಸರೂ ಸೇರ್ಪಡೆಯಾಗಿದೆ.

ನವದೀಪ್ ಸೈನಿ ತಮ್ಮ ಬಹುಕಾಲದ ಗೆಳತಿ ಸ್ವಾತಿ ಅಸ್ಥಾನಾ ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ.

ನವದೀಪ್ ಸೈನಿ ತಮ್ಮ ಬಹುಕಾಲದ ಗೆಳತಿ ಸ್ವಾತಿ ಅಸ್ಥಾನಾ ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ.

ನವದೀಪ್ ತಮ್ಮ ಮದುವೆಯ ಮಾಹಿತಿಯನ್ನು ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ನವದೀಪ್ ತಮ್ಮ ಮದುವೆಯ ಮಾಹಿತಿಯನ್ನು ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಅದರಲ್ಲಿ ಇಂದು ನಾವು ಶಾಶ್ವತವಾಗಿ ಒಬ್ಬರಿಗೊಬ್ಬರು ಸೇರಬೇಕೆಂದು ನಿರ್ಧರಿಸಿದ್ದೇವೆ. ಜೀವನದ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದೇವೆ. ಆದ್ದರಿಂದ ನಾವು ನಿಮ್ಮ ಆಶೀರ್ವಾದ ಮತ್ತು ಪ್ರೀತಿಯನ್ನು ಬಯಸುತ್ತೇವೆ ಎಂದು ಬರೆದುಕೊಂಡಿದ್ದಾರೆ.

ವರದಿಗಳ ಪ್ರಕಾರ, ಸೈನಿ ಮಡದಿ ಸ್ವಾತಿ ಅಸ್ಥಾನಾ ಬ್ಲಾಗರ್ ಮತ್ತು ಯೂಟ್ಯೂಬ್ ಚಾನೆಲ್ ಅನ್ನು ಸಹ ಹೊಂದಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಸ್ವಾತಿ 80,000 ಕ್ಕೂ ಹೆಚ್ಚು ಫಾಲೋವರ್ಸ್ ಇದ್ದಾರೆ.

ನವದೀಪ್ ಸೈನಿ ಭಾರತದ ಪರ ಇದುವರೆಗೆ 2 ಟೆಸ್ಟ್, 8 ಏಕದಿನ ಮತ್ತು 11 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.

ನವದೀಪ್ ಟೆಸ್ಟ್ ಮಾದರಿಯಲ್ಲಿ 4 ವಿಕೆಟ್ ಮತ್ತು ಏಕದಿನದಲ್ಲಿ 6 ವಿಕೆಟ್ ಪಡೆದಿದ್ದಾರೆ.

ಪ್ರಸ್ತುತ ಸೈನಿ ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಭಾಗವಾಗಿದ್ದಾರೆ.