14-03-2024

ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಅರ್ಧಶತಕ ಗಳಿಸಿದ 5 ಆಟಗಾರರು

Author: Vinay Bhat

ಡೇವಿಡ್ ವಾರ್ನರ್

ಡೇವಿಡ್ ವಾರ್ನರ್ ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ ವೃತ್ತಿಜೀವನದಲ್ಲಿ 61 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಇವರು ಮೊದಲ ಸ್ಥಾನದಲ್ಲಿದ್ದಾರೆ.

ಡೇವಿಡ್ ವಾರ್ನರ್

ಹಾಗೆಯೆ ಡೇವಿಡ್ ವಾರ್ನರ್ ಅವರು ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಆರೆಂಜ್ ಕ್ಯಾಪ್ ಗೆದ್ದ ದಾಖಲೆಯನ್ನು ಹೊಂದಿದ್ದಾರೆ. ಒಟ್ಟು ಮೂರು ಬಾರಿ ಗೆದ್ದಿದ್ದಾರೆ.

ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ 50 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಕೊಹ್ಲಿ 7263 ರನ್ ಗಳಿಸುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದಾರೆ.

ಶಿಖರ್ ಧವನ್

ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ ವೃತ್ತಿಜೀವನದಲ್ಲಿ 50 ಅರ್ಧಶತಕಗಳನ್ನು ಸಿಡಿಸಿದ್ದಾರೆ.

ರೋಹಿತ್ ಶರ್ಮಾ

ಮುಂಬೈ ತಂಡದ ಆಟಗಾರ ರೋಹಿತ್ ಶರ್ಮಾ ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ ವೃತ್ತಿಜೀವನದಲ್ಲಿ 42 ಅರ್ಧಶತಕಗಳನ್ನು ಸಿಡಿಸಿದ ಸಾಧನೆ ಮಾಡಿದ್ದಾರೆ.

ರೋಹಿತ್ ಶರ್ಮಾ

ರೋಹಿತ್ ಶರ್ಮಾ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ 5 ಪ್ರಶಸ್ತಿಗಳೊಂದಿಗೆ ಧೋನಿ ಜೊತೆ ಅತ್ಯಂತ ಯಶಸ್ವಿ ನಾಯಕರಾಗಿದ್ದಾರೆ.

ಎಬಿ ಡಿವಿಲಿಯರ್ಸ್

ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ 40 ಅರ್ಧಶತಕಗಳನ್ನು ಸಿಡಿಸಿದ್ದಾರೆ.

ಎಬಿ ಡಿವಿಲಿಯರ್ಸ್

ಡಿವಿಲಿಯರ್ಸ್ ಐಪಿಎಲ್ ಇತಿಹಾಸದಲ್ಲಿ ಫ್ರಾಂಚೈಸಿಗಾಗಿ 4522 ರನ್ ಗಳಿಸುವ ಮೂಲಕ ಆರ್​ಸಿಬಿಯ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ.