10-03-2024

100 ಟೆಸ್ಟ್-100 ಐಪಿಎಲ್ ಪಂದ್ಯಗಳನ್ನು ಆಡಿದ ಪ್ಲೇಯರ್ಸ್ ಯಾರು ಗೊತ್ತೇ?

Author: Vinay Bhat

ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಭಾರತ ಪರ 113 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಹಾಗೆಯೆ ಐಪಿಎಲ್‌ನಲ್ಲಿ ಕಿಂಗ್ ಕೊಹ್ಲಿ ಆರ್‌ಸಿಬಿ ಪರ 237 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ.

ರವಿಚಂದ್ರನ್ ಅಶ್ವಿನ್

ರವಿಚಂದ್ರನ್ ಅಶ್ವಿನ್ 197 ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳನ್ನು ಆಡಿದ್ದಾರೆ. ಮತ್ತು 100 ಟೆಸ್ಟ್ ಪಂದ್ಯಗಳನ್ನು ಕಣಕ್ಕಿಳಿದಿದ್ದಾರೆ.

ಎಬಿ ಡಿವಿಲಿಯರ್ಸ್

ದಕ್ಷಿಣ ಆಫ್ರಿಕಾದ ದಿಗ್ಗಜ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ 114 ಟೆಸ್ಟ್ ಪಂದ್ಯಗಳು ಮತ್ತು 184 ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ. ಸದ್ಯ ಇವರು ಐಪಿಎಲ್ ಆಡುತ್ತಿಲ್ಲ.

ಹರ್ಭಜನ್ ಸಿಂಗ್

ಟೀಮ್ ಇಂಡಿಯಾ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 103 ಟೆಸ್ಟ್‌ಗಳ ಜೊತೆಗೆ 163 ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ.

ಬ್ರೆಂಡನ್ ಮೆಕಲಮ್

ಲೆಜೆಂಡ್ ಆಟಗಾರ ಬ್ರೆಂಡನ್ ಮೆಕಲಮ್ 100 ಟೆಸ್ಟ್ ಮತ್ತು 100 ಐಪಿಎಲ್ ಪಂದ್ಯಗಳನ್ನು ಆಡಿದ ಏಕೈಕ ನ್ಯೂಝಿಲೆಂಡ್ ಆಟಗಾರನಾಗಿದ್ದಾರೆ.

ವೀರೇಂದ್ರ ಸೆಹ್ವಾಗ್

ಮಾಜಿ ಸ್ಫೋಟಕ ಬ್ಯಾಟರ್ ವೀರೇಂದ್ರ ಸೆಹ್ವಾಗ್ 103 ಟೆಸ್ಟ್ ಪಂದ್ಯ ಮತ್ತು 104 ಐಪಿಎಲ್ ಪಂದ್ಯಗಳೊಂದಿಗೆ ತಮ್ಮ ವೃತ್ತಿಜೀವನವನ್ನು ಮುಗಿಸಿದರು.

ಸ್ಟೀವ್ ಸ್ಮಿತ್

ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ 109 ಟೆಸ್ಟ್ ಪಂದ್ಯಗಳ ಜೊತೆಗೆ ನಾಲ್ಕು ಐಪಿಎಲ್ ಫ್ರಾಂಚೈಸಿಗಳಲ್ಲಿ ಒಟ್ಟು 103 ಪಂದ್ಯಗಳನ್ನು ಆಡಿದ್ದಾರೆ.

ಇಶಾಂತ್ ಶರ್ಮಾ

ಸದ್ಯ ಟೀಮ್ ಇಂಡಿಯಾದಿಂದ ಹೊರಗಿರುವ ಇಶಾಂತ್ ಶರ್ಮಾ ಒಟ್ಟು 105 ಟೆಸ್ಟ್ ಪಂದ್ಯಗಳನ್ನು ಮತ್ತು 101 ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ.