05-05-2024

ಐಪಿಎಲ್‌ನಲ್ಲಿ ಮತ್ತೊಂದು ದಾಖಲೆ ನಿರ್ಮಿಸಿದ ಕಿಂಗ್ ಕೊಹ್ಲಿ..!

Author: ಪೃಥ್ವಿ ಶಂಕರ

ಆರ್​ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಈ ಆವೃತ್ತಿಯ ಐಪಿಎಲ್​ನಲ್ಲಿ ಅಮೋಘ ಫಾರ್ಮ್​ನಲ್ಲಿದ್ದು, ಅತ್ಯಧಿಕ ರನ್ ಕಲೆಹಾಕುವ ಮೂಲಕ ಆರೆಂಜ್ ಕ್ಯಾಪ್ ತನ್ನದಾಗಿಸಿಕೊಂಡಿದ್ದಾರೆ.

ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲೂ 27 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಾಯದಿಂದ 42 ರನ್ ಬಾರಿಸಿದ ಕೊಹ್ಲಿ ಅಪರೂಪದ ದಾಖಲೆ ನಿರ್ಮಿಸಿದರು.

42 ರನ್​ಗಳ ಇನ್ನಿಂಗ್ಸ್‌ ಮೂಲಕ ಕೊಹ್ಲಿ ಐಪಿಎಲ್ ಗೆದ್ದ ಪಂದ್ಯಗಳಲ್ಲಿ 4000 ರನ್ ಗಳಿಸಿದ ಏಕೈಕ ಬ್ಯಾಟ್ಸ್‌ಮನ್ ಎನಿಸಿಕೊಂಡರು.

ಇನ್ನು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ 3945 ರನ್ ಗಳಿಸಿದ್ದಾರೆ.

ಮೂರನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್‌ನ ರೋಹಿತ್ ಶರ್ಮಾ 3918 ರನ್ ಬಾರಿಸಿದ್ದಾರೆ.

3710 ರನ್ ಬಾರಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ ನಾಲ್ಕನೇ ಸ್ಥಾನದಲ್ಲಿದ್ದಾರೆ.

‘ಸಿಎಸ್​ಕೆ ಮಾಜಿ ಆಲ್ ರೌಂಡರ್ ಸುರೇಶ್ ರೈನಾ 3559 ರನ್ ಬಾರಿಸಿ ಐದನೇ ಸ್ಥಾನದಲ್ಲಿದ್ದಾರೆ.