ದಿಢೀರ್ ಪ್ಲೇ ಆಫ್​ಗೆ ಕ್ವಾಲಿಫೈ ಆದ 3 ತಂಡಗಳು: ಪಾಯಿಂಟ್ಸ್ ಟೇಬಲ್​ನಲ್ಲಿ ಬಿಗ್ ಚೇಂಜ್

19 May 2025                                    Author: Vinay Bhat

Pic credit - Google

ಶುಭ್​ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಡೆಲ್ಲಿ ವಿರುದ್ಧದ ಅಮೋಘ ಗೆಲುವಿನ ಮೂಲಕ ಅಗ್ರಸ್ಥಾನಕ್ಕೇರಿ ಪ್ಲೇ ಆಫ್​ಗೆ ಕ್ವಾಲಿಟೈ ಆಗಿದೆ. ಇವರು ಆಡಿದ 12 ಪಂದ್ಯಗಳ ಪೈಕಿ ಮೋಬತ್ತರಲ್ಲಿ ಜಯ ಸಾಧಿಸಿ ಮೂರರಲ್ಲಿ ಸೋತು 18 ಅಂಕ ಸಂಪಾದಿಸಿದೆ. +0.795 ರನ್​ರೇಟ್ ಹೊಂದಿದೆ.

ಗುಜರಾತ್ ಟೈಟಾನ್ಸ್

ಡೆಲ್ಲಿ ಕ್ಯಾಪಿಟಲ್ಸ್ ಸೋಲು ಕಾಣುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಪ್ಲೇ ಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಆಡಿದ 12 ಪಂದ್ಯಗಳಲ್ಲಿ 8 ರಲ್ಲಿ ಜಯ 3 ಸೋಲು ಹಾಗೂ ಒಂದು ಪಂದ್ಯ ರದ್ದುಗೊಂಡು +0.482 ರನ್​ ರೇಟ್ ಮೂಲಕ 17 ಅಂಕ ಪಡೆದಿದೆ.

ಆರ್​ಸಿಬಿ

ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಮೂರನೇ ಸ್ಥಾನದಲ್ಲಿದ್ದು ಪ್ಲೇ ಆಫ್​ಗೆ ಕ್ವಾಲಿಫೈ ಆಗಿದೆ. ಆಡಿದ 12 ಪಂದ್ಯಗಳಲ್ಲಿ ಎಂಟರಲ್ಲಿ ಜಯ- ಮೂರರಲ್ಲಿ ಸೋಲು ಹಾಗೂ ಒಂದು ಪಂದ್ಯ ರದ್ದುಗೊಂಡು +0.389 ರನ್​ರೇಟ್​ನೊಂದಿಗೆ 17 ಅಂಕ ಪಡೆದುಕೊಂಡಿದೆ.

ಪಂಜಾಬ್ ಕಿಂಗ್ಸ್

ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದೆ. ಆಡಿದ 12 ಪಂದ್ಯಗಳಲ್ಲಿ ಐದು ಸೋಲು ಹಾಗೂ ಏಳು ಜಯ ಕಂಡು 14 ಅಂಕ ಪಡೆದುಕೊಂಡಿದ್ದು, +1.156 ರನ್​ರೇಟ್​ ಹೊಂದಿದೆ.

ಮುಂಬೈ ಇಂಡಿಯನ್ಸ್

ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐದನೇ ಸ್ಥಾನದಲ್ಲಿದೆ. ಆಡಿದ 12 ಪಂದ್ಯಗಳಲ್ಲಿ ಐದರಲ್ಲಿ ಸೋಲು ಉಳಿದ 6 ರಲ್ಲಿ ಜಯ ಹಾಗೂ ಒಂದು ರದ್ದು ಕಂಡು 13 ಅಂಕ ಸಂಪಾದಿಸಿದೆ. +0.260 ರನ್​ರೇಟ್ ಹೊಂದಿದೆ.

ಡೆಲ್ಲಿ ಕ್ಯಾಪಿಟಲ್ಸ್

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆರನೇ ಸ್ಥಾನದಲ್ಲಿದ್ದು ಟೂರ್ನಿಯಿಂದ ಹೊರಬಿದ್ದಿದೆ. ಆಡಿರುವ 13 ಪಂದ್ಯಗಳಲ್ಲಿ ಐದರಲ್ಲಿ ಜಯ- ಆರರಲ್ಲಿ ಸೋಲು ಹಾಗೂ ಒಂದು ಪಂದ್ಯ ರದ್ದು ಕಾಣುವ ಮೂಲಕ +0.193 ರನ್​ ರೇಟ್ ಹೊಂದಿದೆ.

ಕೆಕೆಆರ್

ರಿಷಭ್ ಪಂತ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಏಳನೇ ಸ್ಥಾನದಲ್ಲಿದೆ. ಆಡಿದ 11 ಪಂದ್ಯಗಳಲ್ಲಿ ಐದು ಗೆಲುವು 6 ಸೋಲು ಕಾಣುವ ಮೂಲಕ -0.469 ರನ್​ರೇಟ್​ ಹೊಂದಿದೆ.

ಲಕ್ನೋ ಸೂಪರ್ ಜೈಂಟ್ಸ್

ಸನ್​ರೈಸರ್ಸ್ ಹೈದರಾಬಾದ್ ತಂಡ ಎಂಟನೇ ಸ್ಥಾನದಲ್ಲಿದ್ದು ಟೂರ್ನಿಯಿಂದ ಔಟ್ ಆಗಿದೆ. ಆಡಿದ 11 ಪಂದ್ಯದಲ್ಲಿ ಮೂರು ಗೆಲುವು- ಏಳು ಸೋಲು ಹಾಗೂ ಒಂದು ಪಂದ್ಯ ರದ್ದಾದ ಪರಿಣಾಮ 7 ಅಂಕ ಸಂಪಾದಿಸಿದೆ. -1.192 ರನ್​ ರೇಟ್ ಹೊಂದಿದೆ.

ಸನ್​ರೈಸರ್ಸ್ ಹೈದರಾಬಾದ್

ರಾಜಸ್ಥಾನ್ ರಾಯಲ್ಸ್ ತಂಡ ಟೂರ್ನಿಯಿಂದ ಹೊರಬಿದ್ದಿದೆ. ಆಡಿದ 13 ಪಂದ್ಯಗಳಲ್ಲಿ ಮೂರರಲ್ಲಿ ಜಯ- ಹತ್ತರಲ್ಲಿ ಸೋಲು ಕಂಡಿದೆ. ಪಾಯಿಂಟ್ಸ್ ಟೇಬಲ್​ನಲ್ಲಿ ಒಂಬತ್ತನೇ ಸ್ಥಾನದಲ್ಲಿದ್ದು, -0.701 ರನ್​ ರೇಟ್ ಹೊಂದಿದೆ.

ರಾಜಸ್ಥಾನ್ ರಾಯಲ್ಸ್

ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೂಡ ಟೂರ್ನಿಯಿಂದ ಔಟ್ ಆಗಿದೆ. ಆಡಿರುವ 12 ಪಂದ್ಯಗಳಲ್ಲಿ ಒಂಬತ್ತು ಸೋಲು 3 ಗೆಲುವು ಮೂಲಕ 6 ಅಂಕ ಪಡೆದಿದೆ. ಈ ತಂಡ -0.992 ರನ್ ರೇಟ್​ನೊಂದಿಗೆ ಹತ್ತನೇ ಸ್ಥಾನದಲ್ಲಿದೆ.

ಚೆನ್ನೈ ಸೂಪರ್ ಕಿಂಗ್ಸ್