Ipl 2025 (1)

Pic credit - Google

TV9 Kannada Logo For Webstory First Slide

24 March 2025

ಅಗ್ರಸ್ಥಾನದಿಂದ ಕೆಳಗಿಳಿದ ಆರ್ ಸಿಬಿ: ಇಲ್ಲಿದೆ ಐಪಿಎಲ್ 2025 ಪಾಯಿಂಟ್ಸ್ ಟೇಬಲ್

Srh

ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಸನ್​ರೈಸರ್ಸ್ ಹೈದರಾಬಾದ್ ತಂಡ ಆಡಿದ ಒಂದು ಪಂದ್ಯದಲ್ಲಿ ದೊಡ್ಡ ಮೊತ್ತದ ಅಂತರದಲ್ಲಿ ಗೆದ್ದು 2 ಅಂಕ ಸಂಪಾದಿಸಿದೆ. +2.200 ರನ್​ ರೇಟ್​ನೊಂದಿಗೆ ಅಗ್ರಸ್ಥಾನದಲ್ಲಿದೆ.

ಸನ್​ರೈಸರ್ಸ್ ಹೈದರಾಬಾದ್

Rcb (1)

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಆಡಿದ ಒಂದು ಪಂದ್ಯದಲ್ಲಿ ಜಯ ಸಾಧಿಸಿದ್ದು ಎರಡು ಅಂಕ ಸಂಪಾದಿಸಿದೆ. ಆದರೆ, +2.137 ರನ್​ ರೇಟ್ ಆಧಾರದ ಮೇಲೆ ಎರಡನೇ ಸ್ಥಾನಕ್ಕೆ ಕುಸಿದಿದೆ.

ಆರ್​ಸಿಬಿ

Csk

ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಜಯ ಸಾಧಿಸುವ ಮೂಲಕ ಖಾತೆ ತೆರೆದಿದ್ದು, +0.493 ರನ್ ರೇಟ್​ನೊಂದಿಗೆ ಮೂರನೇ ಸ್ಥಾನದಲ್ಲಿದೆ.

ಚೆನ್ನೈ ಸೂಪರ್ ಕಿಂಗ್ಸ್

ಮುಂಬೈ ಇಂಡಿಯನ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ ತನ್ನ ಅಭಿಯಾನ ಆರಂಭಿಸಿದೆ. ಈ ತಂಡ -0.493 ರನ್​ರೇಟ್​ನೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ಮುಂಬೈ ಇಂಡಿಯನ್ಸ್

ಅಜಿಂಕ್ಯಾ ರಹಾನೆ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆರ್​ಸಿಬಿ ವಿರುದ್ಧ ಸೋಲು ಕಂಡಿತು. ಇವರು ಪಾಯಿಂಟ್ಸ್ ಟೇಬಲ್​ನಲ್ಲಿ ಐದನೇ ಸ್ಥಾನದಲ್ಲಿದ್ದು, -2.137 ರನ್​ ರೇಟ್ ಹೊಂದಿದೆ.

ಕೆಕೆಆರ್

ರಾಜಸ್ಥಾನ್ ರಾಯಲ್ಸ್ ತಂಡ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲು ಕಾಣುವ ಮೂಲಕ ಪಾಯಿಂಟ್ಸ್ ಟೇಬಲ್​ನಲ್ಲಿ ಆರನೇ ಸ್ಥಾನದಲ್ಲಿದ್ದು, -2.200 ರನ್​ ರೇಟ್ ಹೊಂದಿದೆ.

ರಾಜಸ್ಥಾನ್ ರಾಯಲ್ಸ್

ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಇನ್ನೂ ಒಂದು ಪಂದ್ಯವನ್ನು ಆಡಿಲ್ಲ. ಇಂದು (ಮಾ. 24) ವಿಶಾಖಪಟ್ಟಣಂನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.

ಡೆಲ್ಲಿ ಕ್ಯಾಪಿಟಲ್ಸ್

ಶುಭ್​ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಇನ್ನೂ ಒಂದು ಪಂದ್ಯವನ್ನು ಆಡಿಲ್ಲ. ಇವರು ಮಾರ್ಚ್ 25 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಸೆಣೆಸಾಟ ನಡೆಸಲಿದೆ.

ಗುಜರಾತ್ ಟೈಟಾನ್ಸ್

ರಿಷಭ್ ಪಂತ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಲಕ್ನೋ ಸೂಪರ್ ಜೈಂಟ್ಸ್ ತಂಡ ಇನ್ನೂ ಒಂದು ಪಂದ್ಯವನ್ನು ಆಡಿಲ್ಲ. ಇವರು ಇಂದು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್

ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಇನ್ನೂ ಒಂದು ಪಂದ್ಯವನ್ನು ಆಡಿಲ್ಲ. ಇವರು ಮಾರ್ಚ್ 25 ರಂಧು ಗುಜರಾತ್ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದ್ದಾರೆ.

ಪಂಜಾಬ್ ಕಿಂಗ್ಸ್