ಎರಡನೇ ಸ್ಥಾನದಲ್ಲಿ ಆರ್ಸಿಬಿ ಭದ್ರ: ಇಲ್ಲಿದೆ ಐಪಿಎಲ್ 2025 ಪಾಯಿಂಟ್ಸ್ ಟೇಬಲ್
ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಸನ್ರೈಸರ್ಸ್ ಹೈದರಾಬಾದ್ ತಂಡ ಆಡಿದ ಒಂದು ಪಂದ್ಯದಲ್ಲಿ ದೊಡ್ಡ ಮೊತ್ತದ ಅಂತರದಲ್ಲಿ ಗೆದ್ದು 2 ಅಂಕ ಸಂಪಾದಿಸಿದೆ. +2.200 ರನ್ ರೇಟ್ನೊಂದಿಗೆ ಅಗ್ರಸ್ಥಾನದಲ್ಲಿದೆ.
ಸನ್ರೈಸರ್ಸ್ ಹೈದರಾಬಾದ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಆಡಿದ ಒಂದು ಪಂದ್ಯದಲ್ಲಿ ಜಯ ಸಾಧಿಸಿದ್ದು ಎರಡು ಅಂಕ ಸಂಪಾದಿಸಿದೆ. ಆದರೆ, +2.137 ರನ್ ರೇಟ್ ಆಧಾರದ ಮೇಲೆ ಎರಡನೇ ಸ್ಥಾನದಲ್ಲಿ ಭದ್ರವಾಗಿದೆ.
ಆರ್ಸಿಬಿ
ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಜಯ ಸಾಧಿಸುವ ಮೂಲಕ ಖಾತೆ ತೆರೆದಿತ್ತು. ಈ ತಂಡ +0.493 ರನ್ ರೇಟ್ನೊಂದಿಗೆ ಮೂರನೇ ಸ್ಥಾನದಲ್ಲಿದೆ.
ಚೆನ್ನೈ ಸೂಪರ್ ಕಿಂಗ್ಸ್
ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಎಲ್ಎಸ್ಜಿ ವಿರುದ್ಧ ರೋಚಕ ಜಯ ಸಾಧಿಸಿ 2 ಅಂಕ ಪಡೆದುಕೊಂಡಿದೆ. . ಈ ತಂಡ +0.371 ರನ್ ರೇಟ್ನೊಂದಿಗೆ ಮೂರನೇ ಸ್ಥಾನದಲ್ಲಿದೆ.
ಡೆಲ್ಲಿ ಕ್ಯಾಪಿಟಲ್ಸ್
ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಇನ್ನೂ ಒಂದು ಪಂದ್ಯವನ್ನು ಆಡಿಲ್ಲ. ಇವರು ಮಾರ್ಚ್ 25 ರಂದು ಗುಜರಾತ್ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದ್ದಾರೆ.
ಪಂಜಾಬ್ ಕಿಂಗ್ಸ್
ಶುಭ್ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಇನ್ನೂ ಒಂದು ಪಂದ್ಯವನ್ನು ಆಡಿಲ್ಲ. ಇವರು ಮಾರ್ಚ್ 25 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಸೆಣೆಸಾಟ ನಡೆಸಲಿದೆ.
ಗುಜರಾತ್ ಟೈಟಾನ್ಸ್
ರಿಷಭ್ ಪಂತ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲುವ ಮೂಲಕ -0.371 ರನ್ರೇಟ ಹೊಂದಿದ್ದು, ಏಳನೇ ಸ್ಥಾನದಲ್ಲಿದೆ.
ಲಕ್ನೋ ಸೂಪರ್ ಜೈಂಟ್ಸ್
ಮುಂಬೈ ಇಂಡಿಯನ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ ತನ್ನ ಅಭಿಯಾನ ಆರಂಭಿಸಿತು. ಈ ತಂಡ -0.493 ರನ್ರೇಟ್ನೊಂದಿಗೆ ಎಂಟನೇ ಸ್ಥಾನದಲ್ಲಿದೆ.
ಮುಂಬೈ ಇಂಡಿಯನ್ಸ್
ಅಜಿಂಕ್ಯಾ ರಹಾನೆ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆರ್ಸಿಬಿ ವಿರುದ್ಧ ಸೋಲು ಕಂಡಿತು. ಇವರು ಪಾಯಿಂಟ್ಸ್ ಟೇಬಲ್ನಲ್ಲಿ ಒಂಬತ್ತನೇ ಸ್ಥಾನದಲ್ಲಿದ್ದು, -2.137 ರನ್ ರೇಟ್ ಹೊಂದಿದೆ.
ಕೆಕೆಆರ್
ರಾಜಸ್ಥಾನ್ ರಾಯಲ್ಸ್ ತಂಡ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲು ಕಾಣುವ ಮೂಲಕ ಪಾಯಿಂಟ್ಸ್ ಟೇಬಲ್ನಲ್ಲಿ ಹತ್ತನೇ ಸ್ಥಾನದಲ್ಲಿದ್ದು, -2.200 ರನ್ ರೇಟ್ ಹೊಂದಿದೆ.