IPL 2025 Points Table: ಎರಡನೇ ಸ್ಥಾನಕ್ಕೆ ಜಿಗಿದ ಗುಜರಾತ್: ಆರ್ಸಿಬಿ ಮತ್ತೊಂದು ಸ್ಥಾನ ಕೆಳಕ್ಕೆ
03 May 2025 Author: Vinay Bhat
Pic credit - Google
ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಆಡಿದ 11 ಪಂದ್ಯಗಳಲ್ಲಿ ನಾಲ್ಕು ಸೋಲು ಹಾಗೂ ಏಳು ಜಯ ಕಂಡು 14 ಅಂಕ ಪಡೆದುಕೊಂಡಿದ್ದು, +1.274 ರನ್ರೇಟ್ ಹೊಂದಿದೆ.
ಮುಂಬೈ ಇಂಡಿಯನ್ಸ್
ನಾಲ್ಕನೇ ಸ್ಥಾನದಲ್ಲಿದ್ದ ಶುಭ್ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಹೈದರಾಬಾದ್ ವಿರುದ್ಧ ಗೆದ್ದು ಎರಡನೇ ಸ್ಥಾನಕ್ಕೇರಿದೆ. ಇವರು ಆಡಿದ 10 ಪಂದ್ಯಗಳ ಪೈಕಿ ಏಳರಲ್ಲಿ ಜಯ ಸಾಧಿಸಿ ಮೂರರಲ್ಲಿ ಸೋತು 14 ಅಂಕ ಸಂಪಾದಿಸಿದೆ. +0.867 ರನ್ರೇಟ್ ಹೊಂದಿದೆ.
ಗುಜರಾತ್ ಟೈಟಾನ್ಸ್
ದ್ವಿತೀಯ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತೃತೀಯ ಸ್ಥಾನಕ್ಕೆ ಕುಸಿದಿದೆ. ಆಡಿದ 10 ಪಂದ್ಯಗಳಲ್ಲಿ 7 ಜಯ 3 ಸೋಲು ಕಂಡಿದೆ. +0.521 ರನ್ ರೇಟ್ ಆಧಾರದ ಮೇಲೆ 14 ಅಂಕ ಪಡೆದುಕೊಂಡಿದೆ.
ಆರ್ಸಿಬಿ
ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದೆ. ಈ ಋತುವಿನಲ್ಲಿ ಆಡಿದ 10 ಪಂದ್ಯಗಳಲ್ಲಿ ಆರಲ್ಲಿ ಜಯ- ಮೂರರಲ್ಲಿ ಸೋಲು ಹಾಗೂ ಒಂದು ಪಂದ್ಯ ರದ್ದುಗೊಂಡು +0.199 ರನ್ರೇಟ್ನೊಂದಿಗೆ 13 ಅಂಕ ಪಡೆದುಕೊಂಡಿದೆ.
ಪಂಜಾಬ್ ಕಿಂಗ್ಸ್
ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐದನೇ ಸ್ಥಾನದಲ್ಲಿದೆ. ಆಡಿದ 10 ಪಂದ್ಯಗಳಲ್ಲಿ ನಾಲ್ಕು ಪಂದ್ಯದಲ್ಲಿ ಸೋಲು ಉಳಿದ 6 ರಲ್ಲಿ ಜಯ ಕಂಡು 12 ಅಂಕ ಸಂಪಾದಿಸಿದೆ. +0.362 ರನ್ರೇಟ್ ಹೊಂದಿದೆ.
ಡೆಲ್ಲಿ ಕ್ಯಾಪಿಟಲ್ಸ್
ರಿಷಭ್ ಪಂತ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಆರನೇ ಸ್ಥಾನಕ್ಕೆ ಕುಸಿದಿದೆ. ಆಡಿದ 10 ಪಂದ್ಯಗಳಲ್ಲಿ ಐದು ಗೆಲುವು 5 ಸೋಲು ಕಾಣುವ ಮೂಲಕ -0.325 ರನ್ರೇಟ್ ಹೊಂದಿದೆ.
ಲಕ್ನೋ ಸೂಪರ್ ಜೈಂಟ್ಸ್
ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಏಳನೇ ಸ್ಥಾನಕ್ಕೆ ಕುಸಿದಿದೆ. ಆಡಿರುವ 10 ಪಂದ್ಯಗಳಲ್ಲಿ ನಾಲ್ಕರಲ್ಲಿ ಜಯ- ಐದರಲ್ಲಿ ಸೋಲು ಕಾಣುವ ಮೂಲಕ +0.271 ರನ್ ರೇಟ್ ಹೊಂದಿದೆ.
ಕೆಕೆಆರ್
ರಾಜಸ್ಥಾನ್ ರಾಯಲ್ಸ್ ತಂಡ ಟೂರ್ನಿಯಿಂದ ಹೊರಬಿದ್ದಿದೆ. ಆಡಿದ 11 ಪಂದ್ಯಗಳಲ್ಲಿ ಮೂರರಲ್ಲಿ ಜಯ- ಎಂಟರಲ್ಲಿ ಸೋಲು ಕಂಡಿದೆ. ಪಾಯಿಂಟ್ಸ್ ಟೇಬಲ್ನಲ್ಲಿ ಎಂಟನೇ ಸ್ಥಾನದಲ್ಲಿದ್ದು, -0.780 ರನ್ ರೇಟ್ ಹೊಂದಿದೆ.
ರಾಜಸ್ಥಾನ್ ರಾಯಲ್ಸ್
ಸನ್ರೈಸರ್ಸ್ ಹೈದರಾಬಾದ್ ತಂಡ ಒಂಬತ್ತನೇ ಸ್ಥಾನದಲ್ಲಿದೆ. ಆಡಿದ 10 ಪಂದ್ಯದಲ್ಲಿ ಮೂರು ಗೆಲುವು- ಏಳು ಸೋಲಿನ ಮೂಲಕ 6 ಅಂಕ ಸಂಪಾದಿಸಿದೆ. -1.192 ರನ್ ರೇಟ್ ಹೊಂದಿದೆ.
ಸನ್ರೈಸರ್ಸ್ ಹೈದರಾಬಾದ್
ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಡಿರುವ 10 ಪಂದ್ಯಗಳಲ್ಲಿ ಎಂಟು ಸೋಲು 2 ಗೆಲುವು ಮೂಲಕ 4 ಅಂಕ ಪಡೆದಿದೆ. ಈ ತಂಡ -1.211 ರನ್ ರೇಟ್ನೊಂದಿಗೆ ಹತ್ತನೇ ಸ್ಥಾನದಲ್ಲಿದೆ.