IPL 2025 Points Table: ಅಗ್ರಸ್ಥಾನದಲ್ಲಿ ಆರ್ಸಿಬಿ ಭದ್ರ: ಸೋತರೂ ಅಲ್ಲಾಡದ ಗುಜರಾತ್
29 April 2025 Author: Vinay Bhat
Pic credit - Google
ಮೊನ್ನೆ ಪಂಜಾಬ್ ವಿರುದ್ಧ ಟಾಪ್ನಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಆಡಿದ 10 ಪಂದ್ಯಗಳಲ್ಲಿ 7 ಜಯ 3 ಸೋಲು ಕಂಡಿದೆ. +0.521 ರನ್ ರೇಟ್ ಆಧಾರದ ಮೇಲೆ 14 ಅಂಕ ಪಡೆದುಕೊಂಡಿದೆ.
ಆರ್ಸಿಬಿ
ಮುಂಬೈ ಇಂಡಿಯನ್ಸ್ ತಂಡ ಎರಡನೇ ಸ್ಥಾನದಲ್ಲಿದೆ. ಆಡಿದ 10 ಪಂದ್ಯಗಳಲ್ಲಿ ನಾಲ್ಕು ಸೋಲು ಹಾಗೂ ಆರು ಜಯ ಕಂಡು 12 ಅಂಕ ಪಡೆದುಕೊಂಡಿದ್ದು, +0.889 ರನ್ರೇಟ್ ಹೊಂದಿದೆ.
ಮುಂಬೈ ಇಂಡಿಯನ್ಸ್
ಶುಭ್ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಮೂರನೇ ಸ್ಥಾನದಲ್ಲಿದೆ. ಇವರು ಆಡಿದ 9 ಪಂದ್ಯಗಳ ಪೈಕಿ ಆರರಲ್ಲಿ ಜಯ ಸಾಧಿಸಿ ಮೂರರಲ್ಲಿ ಸೋತು 12 ಅಂಕ ಸಂಪಾದಿಸಿದೆ. +0.748 ರನ್ರೇಟ್ ಹೊಂದಿದೆ.
ಗುಜರಾತ್ ಟೈಟಾನ್ಸ್
ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದೆ. ಆಡಿದ 9 ಪಂದ್ಯಗಳಲ್ಲಿ ಮೂರು ಪಂದ್ಯದಲ್ಲಿ ಸೋಲು ಉಳಿದ 6 ರಲ್ಲಿ ಜಯ ಕಂಡು 12 ಅಂಕ ಸಂಪಾದಿಸಿದೆ. +0.482 ರನ್ರೇಟ್ ಹೊಂದಿದೆ.
ಡೆಲ್ಲಿ ಕ್ಯಾಪಿಟಲ್ಸ್
ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಐದನೇ ಸ್ಥಾನಕ್ಕೆ ಕುಸಿದಿದೆ. ಈ ಋತುವಿನಲ್ಲಿ ಆಡಿದ 9 ಪಂದ್ಯಗಳಲ್ಲಿ ಐದರಲ್ಲಿ ಜಯ- ಮೂರರಲ್ಲಿ ಸೋಲು ಹಾಗೂ ಒಂದು ಪಂದ್ಯ ರದ್ದುಗೊಂಡು +0.177 ರನ್ರೇಟ್ನೊಂದಿಗೆ 11 ಅಂಕ ಪಡೆದುಕೊಂಡಿದೆ.
ಪಂಜಾಬ್ ಕಿಂಗ್ಸ್
ರಿಷಭ್ ಪಂತ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಆರನೇ ಸ್ಥಾನಕ್ಕೆ ಕುಸಿದಿದೆ. ಆಡಿದ 10 ಪಂದ್ಯಗಳಲ್ಲಿ ಐದು ಗೆಲುವು 5 ಸೋಲು ಕಾಣುವ ಮೂಲಕ -0.325 ರನ್ರೇಟ್ ಹೊಂದಿದೆ.
ಲಕ್ನೋ ಸೂಪರ್ ಜೈಂಟ್ಸ್
ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಏಳನೇ ಸ್ಥಾನಕ್ಕೆ ಕುಸಿದಿದೆ. ಆಡಿರುವ 9 ಪಂದ್ಯಗಳಲ್ಲಿ ಮೂರು ಜಯ- ಐದರಲ್ಲಿ ಸೋಲು ಕಾಣುವ ಮೂಲಕ +0.212 ರನ್ ರೇಟ್ ಹೊಂದಿದೆ.
ಕೆಕೆಆರ್
ರಾಜಸ್ಥಾನ್ ರಾಯಲ್ಸ್ ತಂಡ ಆಡಿದ 10 ಪಂದ್ಯಗಳಲ್ಲಿ ಮೂರರಲ್ಲಿ ಜಯ- ಏಳರಲ್ಲಿ ಸೋಲು ಕಂಡಿದೆ. ಪಾಯಿಂಟ್ಸ್ ಟೇಬಲ್ನಲ್ಲಿ ಎಂಟನೇ ಸ್ಥಾನದಲ್ಲಿದ್ದು, -0.349 ರನ್ ರೇಟ್ ಹೊಂದಿದೆ.
ರಾಜಸ್ಥಾನ್ ರಾಯಲ್ಸ್
ಸನ್ರೈಸರ್ಸ್ ಹೈದರಾಬಾದ್ ತಂಡ ಒಂಬತ್ತನೇ ಸ್ಥಾನದಲ್ಲಿದೆ. ಆಡಿದ 9 ಪಂದ್ಯದಲ್ಲಿ ಮೂರು ಗೆಲುವು- ಆರು ಸೋಲಿನ ಮೂಲಕ 6 ಅಂಕ ಸಂಪಾದಿಸಿದೆ. -1.103 ರನ್ ರೇಟ್ ಹೊಂದಿದೆ.
ಸನ್ರೈಸರ್ಸ್ ಹೈದರಾಬಾದ್
ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಡಿರುವ 9 ಪಂದ್ಯಗಳಲ್ಲಿ ಏಳು ಸೋಲು 2 ಗೆಲುವು ಮೂಲಕ 4 ಅಂಕ ಪಡೆದಿದೆ. ಈ ತಂಡ -1.302 ರನ್ ರೇಟ್ನೊಂದಿಗೆ ಹತ್ತನೇ ಸ್ಥಾನದಲ್ಲಿದೆ.