Ipl 2025 (1)

Pic credit - Google

TV9 Kannada Logo For Webstory First Slide

28 March 2025

ದಿಢೀರ್ ಅಗ್ರಸ್ಥಾನಕ್ಕೇರಿದ ಆರ್​ಸಿಬಿ: ಪಾಯಿಂಟ್ಸ್ ಟೇಬಲ್​ನಲ್ಲಿ ಬಿಗ್ ಚೇಂಜ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿದ ಒಂದು ಪಂದ್ಯದಲ್ಲಿ ಜಯ ಸಾಧಿಸಿದ್ದು ಎರಡು ಅಂಕ ಸಂಪಾದಿಸಿ ಅಗ್ರಸ್ಥಾನದಲ್ಲಿದೆ. +2.137 ರನ್​ ರೇಟ್ ಕಾಪಾಡಿಕೊಂಡಿದೆ. ನಿನ್ನೆ ಎಲ್​ಎಸ್​ಜಿ ವಿರುದ್ಧ ಎಸ್​ಆರ್​ಹೆಚ್ ಸೋತ ಪರಿಣಾಮ ಬೆಂಗಳೂರು ಟಾಪ್​ಗೆ ಬಂದಿದೆ.

ಆರ್​ಸಿಬಿ

ರಿಷಭ್ ಪಂತ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಆಡಿದ ಎರಡು ಪಂದ್ಯಗಳಲ್ಲಿ ಒಂದು ಗೆಲುವು ಮತ್ತೊಂದು ಸೋಲು ಕಾಣುವ ಮೂಲಕ +0.963 ರನ್​ರೇಟ್​ ನೊಂದಿಗೆ ಎರಡನೇ ಸ್ಥಾನಕ್ಕೇರಿದೆ.

ಲಕ್ನೋ ಸೂಪರ್ ಜೈಂಟ್ಸ್

ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ಈ ಋತುವನ್ನು ಅದ್ಭುತಾಗಿ ಆರಂಭಿಸಿದೆ. ಆಡಿದ ಒಂದು ಪಂದ್ಯದಲ್ಲಿ ಶುಭಾರಂಭ ಮಾಡಿ +0.550 ರನ್​ರೇಟ್​ನೊಂದಿಗೆ 3ನೇ ಸ್ಥಾನದಲ್ಲಿದೆ.

ಪಂಜಾಬ್ ಕಿಂಗ್ಸ್

ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಜಯ ಸಾಧಿಸುವ ಮೂಲಕ ಖಾತೆ ತೆರೆದಿತ್ತು. ಈ ತಂಡ +0.493 ರನ್ ರೇಟ್​ನೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ಚೆನ್ನೈ ಸೂಪರ್ ಕಿಂಗ್ಸ್

ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಎಲ್​ಎಸ್​ಜಿ ವಿರುದ್ಧ ರೋಚಕ ಜಯ ಸಾಧಿಸಿ 2 ಅಂಕ ಪಡೆದುಕೊಂಡಿತು. ಈ ತಂಡ +0.371 ರನ್ ರೇಟ್​ನೊಂದಿಗೆ ಐದನೇ ಸ್ಥಾನದಲ್ಲಿದೆ.

ಡೆಲ್ಲಿ ಕ್ಯಾಪಿಟಲ್ಸ್

ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಸನ್​ರೈಸರ್ಸ್ ಹೈದರಾಬಾದ್ ತಂಡ ಆಡಿದ ಎರಡು ಪಂದ್ಯದಲ್ಲಿ ಒಂದು ಗೆಲುವು-ಒಂದು ಸೋಲಿನ ಮೂಲಕ 2 ಅಂಕ ಸಂಪಾದಿಸಿದೆ. -0.128 ರನ್​ ರೇಟ್​ನೊಂದಿಗೆ ಆರನೇ ಸ್ಥಾನದಲ್ಲಿದೆ.

ಸನ್​ರೈಸರ್ಸ್ ಹೈದರಾಬಾದ್

ಅಜಿಂಕ್ಯಾ ರಹಾನೆ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆಡಿರುವ ಎರಡು ಪಂದ್ಯಗಳಲ್ಲಿ ಒಂದು ಸೋಲು-ಗೆಲುವು ಮೂಲಕ ಇವರು ಪಾಯಿಂಟ್ಸ್ ಟೇಬಲ್​ನಲ್ಲಿ ಏಳನೇ ಸ್ಥಾನದಲ್ಲಿದ್ದು, -2.308 ರನ್​ ರೇಟ್ ಹೊಂದಿದೆ.

ಕೆಕೆಆರ್

ಮುಂಬೈ ಇಂಡಿಯನ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ ತನ್ನ ಅಭಿಯಾನ ಆರಂಭಿಸಿತು. ಈ ತಂಡ -0.493 ರನ್​ರೇಟ್​ನೊಂದಿಗೆ ಎಂಟನೇ ಸ್ಥಾನದಲ್ಲಿದೆ.

ಮುಂಬೈ ಇಂಡಿಯನ್ಸ್

ಶುಭ್​ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಆಡಿದ ಒಂದು ಪಂದ್ಯದಲ್ಲಿ ಸೋಲುಂಡಿದೆ. ಇವರು ಶೂನ್ಯ ಅಂಕದೊಂದಿಗೆ -0.550 ರನ್​ರೇಟ್ ಹೊಂದಿ ಒಂಬತ್ತನೇ ಸ್ಥಾನದಲ್ಲಿದ್ದಾರೆ.

ಗುಜರಾತ್ ಟೈಟಾನ್ಸ್

ರಾಜಸ್ಥಾನ್ ರಾಯಲ್ಸ್ ತಂಡ ಆಡಿದ ಎರಡೂ ಪಂದ್ಯಗಳಲ್ಲಿ ಸೋಲು ಕಂಡಿದೆ. ಪಾಯಿಂಟ್ಸ್ ಟೇಬಲ್​ನಲ್ಲಿ ಹತ್ತನೇ ಸ್ಥಾನದಲ್ಲಿದ್ದು, -1.882 ರನ್​ ರೇಟ್ ಹೊಂದಿದೆ.

ರಾಜಸ್ಥಾನ್ ರಾಯಲ್ಸ್