ವಿಶ್ವಕಪ್ 2023ರಲ್ಲಿ ವೇಗದ ಶತಕ ಸಿಡಿಸಿದ್ದು ಇವರೇ ನೋಡಿ

13-November-2023

ಗ್ಲೆನ್ ಮ್ಯಾಕ್ಸ್‌ವೆಲ್ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕ ಬಾರಿಸಿದ ದಾಖಲೆ ಹೊಂದಿದ್ದಾರೆ. ನೆದರ್ಲೆಂಡ್ಸ್ ವಿರುದ್ಧ 40 ಎಸೆತಗಳಲ್ಲಿ 100 ರನ್ ಪೂರೈಸಿದರು.

ಗ್ಲೆನ್ ಮ್ಯಾಕ್ಸ್‌ವೆಲ್

ಅಕ್ಟೋಬರ್ 7 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ಏಡೆನ್ ಮಾರ್ಕ್ರಾಮ್ ಕೇವಲ 48 ಎಸೆತಗಳಲ್ಲಿ ಶತಕ ಪೂರೈಸಿದರು.

ಏಡೆನ್ ಮಾರ್ಕ್ರಾಮ್

ತನ್ನ ಮೊದಲ ODI ವಿಶ್ವಕಪ್ 2023 ಪಂದ್ಯದಲ್ಲಿ, ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ಅಕ್ಟೋಬರ್ 28 ರಂದು ನ್ಯೂಝಿಲೆಂಡ್ ವಿರುದ್ಧ 59 ಎಸೆತಗಳಲ್ಲಿ ಶತಕ ಗಳಿಸಿದರು.

ಟ್ರಾವಿಸ್ ಹೆಡ್

ಅಕ್ಟೋಬರ್ 21 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾದ ಹೆನ್ರಿಕ್ ಕ್ಲಾಸೆನ್ ಕೇವಲ 61 ಎಸೆತಗಳಲ್ಲಿ ಶತಕ ಸಿಡಿಸಿದರು.

ಹೆನ್ರಿಕ್ ಕ್ಲಾಸೆನ್

ಭಾರತ ಪರ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಅತಿ ವೇಗದ ಶತಕ (62 ಎಸೆತ) ಗಳಿಸಿದ ದಾಖಲೆಯನ್ನು ಕೆಎಲ್ ರಾಹುಲ್ ಹೊಂದಿದ್ದಾರೆ.

ಕೆಎಲ್ ರಾಹುಲ್

ನವೆಂಬರ್ 4 ರಂದು ಬೆಂಗಳೂರಿನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಫಖರ್ ಜಮಾನ್ ಕೇವಲ 63 ಎಸೆತಗಳಲ್ಲಿ ಶತಕ ಸಿಡಿಸಿದ್ದರು.

ಫಖರ್ ಜಮಾನ್

ಅಕ್ಟೋಬರ್ 11 ರಂದು ದೆಹಲಿಯಲ್ಲಿ ನಡೆದ ಭಾರತ-ಅಫ್ಘಾನಿಸ್ತಾನ ಪಂದ್ಯದ ವೇಳೆ ರೋಹಿತ್ ಶರ್ಮಾ ಕೇವಲ 63 ಎಸೆತಗಳಲ್ಲಿ 100 ರನ್ ಪೂರೈಸಿದರು.

ರೋಹಿತ್ ಶರ್ಮಾ

ಶ್ರೀಲಂಕಾದ ಕುಸಾಲ್ ಮೆಂಡಿಸ್ ಅಕ್ಟೋಬರ್ 10 ರಂದು ಹೈದರಾಬಾದ್‌ನಲ್ಲಿ ಪಾಕಿಸ್ತಾನ ವಿರುದ್ಧ 65 ಎಸೆತಗಳಲ್ಲಿ ಶತಕ ಗಳಿಸಿದರು.

ಕುಸಾಲ್ ಮೆಂಡಿಸ್

ಸೆಮೀಸ್'ಗು ಮುನ್ನ ಭಾರತಕ್ಕೆ ಶಾಕ್: ಮತ್ತೊಬ್ಬ ಆಟಗಾರ ಇಂಜುರಿ